ಹಿರೇಮೈಥೆಯಲ್ಲಿ ಇಂದು ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆ

Written by Mahesha Hindlemane

Updated on:

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್ ಹಿಂಡ್ಲೆಮನೆ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಬೆಳಗ್ಗೆ 10 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು ಜಿಲ್ಲಾ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘನ ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಬೇಳೂರು ಗೋಪಾಲಕೃಷ್ಣ ನೆರವೇರಿಸಲಿದ್ದಾರೆ. ಶಾಸಕ ಆರಗ ಜ್ಞಾನೇಂದ್ರ ಹಿರಿಯರಿಗೆ ಸನ್ಮಾನ ಮಾಡುವರು. ತಾಲೂಕು ಕುಂಬಾರರ ಸಂಘದ ಅಧ್ಯಕ್ಷ ಶೇಖರಪ್ಪ ಎಲ್ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್, ಹರತಾಳು ಹಾಲಪ್ಪ, ಜಿಪಂ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭಾಗವಹಿಸಲಿದ್ದಾರೆ.

ವಿಶೇಷವಾಗಿ ಕಾರ್ಯಕ್ರಮದಲ್ಲಿ ಹಿರಿಯರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಏರ್ಪಡಿಸಲಾಗಿದೆ. ಇನ್ನೂ ಮಧ್ಯಾಹ್ನ ಸಾರ್ವಜನಿಕ ಅನ್ನಸಂತರ್ಪಣೆ ಸಹ ಇರುತ್ತದೆ.

Leave a Comment