ರಿಪ್ಪನ್‌ಪೇಟೆಯ ವಿವಿಧೆಡೆ 75ನೇ ಗಣರಾಜ್ಯೋತ್ಸವ ಸಂಭ್ರಮ

0 186

ರಿಪ್ಪನ್‌ಪೇಟೆ: 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ರಿಪ್ಪನ್‌ಪೇಟೆಯ ವಿವಿಧೆಡೆಯಲ್ಲಿ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಜರುಗಿತು.

ಕೋಡೂರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಉಮೇಶ್ ಕೆ.ಎಸ್. ಧ್ವಜಾರೋಹಣ ನೆರವೇರಿಸಿದರು.

ಗ್ರಾಮ ಪಂಚಾಯ್ತಿ ಕಛೇರಿಯಲ್ಲಿ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ಧ್ವಜಾರೋಹಣ ನೆರವೇರಿಸಿ ಧ್ವಜ ವಂದನೆ ಸ್ವಿಕರಿಸಿದರು. ಪೊಲೀಸ್ ಠಾಣೆಯಲ್ಲಿ ಪಿ.ಎಸ್.ಐ ಪ್ರವೀಣ್‌ಕುಮಾರ್ ಎಸ್.ಪಿ, ನಾಡಕಛೇರಿಯಲ್ಲಿ ಉಪತಹಶೀಲ್ದಾರ್ ಹುಚ್ಚರಾಯಪ್ಪ, ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಕೆನರಾ ಬ್ಯಾಂಕ್‌ನಲ್ಲಿ ಬ್ಯಾಂಕ್ ವ್ಯವಸ್ಥಾಪಕ ದೇವರಾಜ್, ಜುಮ್ಮಾ ಮಸೀದಿಯಲ್ಲಿ ಧರ್ಮಗುರುಗಳು, ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ಅಧಿಕಾರಿಗಳು, ಬಿ.ಸಿ.ಎಂ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಎಸ್.ಸಿ.ಎಸ್.ಟಿ, ಹಾಸ್ಟೆಲ್‌ನಲ್ಲಿ ಮೇಲ್ವಿಚಾರಕ ರಾಘವೇಂದ್ರ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಮಂಜಪ್ಪ, ಬರುವೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿನ ಎಸ್.ಡಿ.ಎಂ.ಸಿ. ಅಧ್ಯಕ್ಷ ರಾಘವೇಂದ್ರ, ಪಶು ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್.ಡಿ.ಎಂ.ಸಿ. ಅಧ್ಯಕ್ಷ ಗುರುರಾಜ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಎ.ಮಂಜುನಾಥ, ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಪ್ರಾಚಾರ್ಯ ಟಿ.ಚಂದ್ರಶೇಖರ್, ಶ್ರೀಬಸವೇಶ್ವರ ವಿದ್ಯಾಲಯದಲ್ಲಿ, ಗುಡ್‌ಶಫರ್ಡ್ ಶಾಲೆ, ಮೇರಿ ಮಾತಾ ಪ್ರೌಢಶಾಲೆಯಲ್ಲಿ, ಶ್ರೀಶಾರದ ರಾಮಕೃಷ್ಣ ವಿದ್ಯಾಲಯದಲ್ಲಿ ಹಾಗೂ ಅರಸಾಳು ವಲಯ ಅರಣ್ಯಾಧಿಕಾರಿಗಳ ಕಛೇರಿಯಲ್ಲಿ ಆರ್.ಎಫ್.ಓ ಬಾಬುರಾಜೇಂದ್ರ ಪ್ರಸಾದ್, ಹೆದ್ದಾರಿಪುರ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಹುಂಚ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷೆ, ಕೋಡೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷ ಉಮೇಶ್, ಅಮೃತ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಬೆಳ್ಳೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಬಾಳೂರು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಅರಸಾಳು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು, ಹರತಾಳು ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು ಹಾಗೂ ಚಿಕ್ಕಜೇನಿ ಗ್ರಾಮ ಪಂಚಾಯ್ತಿಯಲ್ಲಿ ಪಂಚಾಯತಿ ಅಧ್ಯಕ್ಷರು 75ನೇ ಗಣರಾಜ್ಯೋತ್ಸವದ ಧ್ವಜಾರೋಹಣಗೈದು ಸಂಭ್ರಮ ಸಡಗರದೊಂದಿಗೆ ಆಚರಿಸಿದರು.

ಕೋಡೂರಿನ ಬ್ಲಾಸಂ ಇಂಗ್ಲಿಷ್ ಮೀಡಿಯಂ ಸ್ಕೂಲ್‌ನಲ್ಲಿ ಅದ್ದೂರಿಯಾಗಿ 75ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ ಧ್ವಜಾರೋಹಣ ನೆರವೇರಿಸಿದರು.
Leave A Reply

Your email address will not be published.