ಹೊಸನಗರ ; ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಕಾಲಸಸಿ ಸತೀಶ್ ಕಾಂಗ್ರೆಸ್‌ ಸೇರ್ಪಡೆ

Written by Mahesha Hindlemane

Published on:

ಹೊಸನಗರ ; ಹೊಸನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ನಿರ್ವಹಿಸುತ್ತಿದ್ದ ಕಾಲಸಸಿ ಸತೀಶ್‌ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಶಾಸಕ ಬೇಳೂರು ಗೋಪಾಲಕೃಷ್ಣರ ನಿವಾಸದಲ್ಲಿ ಕಾಂಗ್ರೆಸ್‌ಗೆ ಅಧಿಕೃತವಾಗಿ ತಮ್ಮ ಬೆಂಬಲಿಗರೊಂದಿಗೆ ಸೇರ್ಪಡೆಯಾದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸುಮಾರು ಒಂದೂವರೆ ವರ್ಷದಿಂದ ಬಿಜೆಪಿ ಪಕ್ಷದಿಂದ ದೂರವಿದ್ದು ಬಿಜೆಪಿ ಪಕ್ಷದ ಸಿದ್ಧಾಂತಗಳು ಹಿಡಿಸದೇ ಇದ್ದದ್ದರಿಂದ ನಾನು ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಬಿಜೆಪಿ ಪಕ್ಷ ನನಗೆ ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಚುನಾವಣೆ ಸಂದರ್ಭದಲ್ಲಿ ಹಾಗೂ ನಾನು ಅಧ್ಯಕ್ಷರಾಗಿ ಆಯ್ಕೆಯಾಗುವ ಸಂದರ್ಭದಲ್ಲಿ ನನ್ನ ಜೊತೆಗಿದ್ದು ಕೆಲಸ ಮಾಡಿದೆ ಎಂದರು.

Leave a Comment