ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು ; ಸಚಿವ ಈಶ್ವರ ಖಂಡ್ರೆ ಸಂತಾಪ

Written by Koushik G K

Published on:

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ (Hippopotamus) ದಾಳಿಗೆ ಒಳಗಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ ಸೂಚಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಕುರಿತು ಪ್ರಕಟಣೆ ನೀಡಿದ ಸಚಿವರು, “ಇದು ಅತ್ಯಂತ ದುರದೃಷ್ಟಕರ ಘಟನೆ. ಈ ದುಃಖದ ಸಂದರ್ಭದಲ್ಲಿ ಮೃತ ವೈದ್ಯೆಯ ಕುಟುಂಬದೊಂದಿಗೆ ಸರ್ಕಾರ ನಿಂತಿದೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬಕ್ಕೆ ದೊರಕಲಿ” ಎಂದು ಶೋಕ ವ್ಯಕ್ತಪಡಿಸಿದರು.

ಮೃತ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ಅವರು ಇತ್ತೀಚೆಗೆ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದರು. ನಿನ್ನೆ ರಾತ್ರಿ ಸುಮಾರು 11.30 ಗಂಟೆಗೆ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದಾಗ ನೀರಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸುಮಾರು 6.30 ಗಂಟೆಗೆ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ನಿಯಮಾನುಸಾರ ಪರಿಹಾರವನ್ನು ತಕ್ಷಣ ನೀಡಲು ಸಚಿವರು ಸೂಚನೆ ನೀಡಿದ್ದಾರೆ. ಅಲ್ಲದೆ ರಾಜ್ಯದ ಎಲ್ಲಾ ಮೃಗಾಲಯಗಳಲ್ಲಿ ಪಶುವೈದ್ಯರು ವನ್ಯಜೀವಿಗಳಿಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ನಿಗದಿತ ಮಾನದಂಡ (SOP)ಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಈ ದುರಂತದ ಬಗ್ಗೆ ಹಿರಿಯ ಪಶುವೈದ್ಯರು ಹಾಗೂ ಅರಣ್ಯಾಧಿಕಾರಿಗಳನ್ನು ಒಳಗೊಂಡ ತಂಡದಿಂದ ತನಿಖೆ ನಡೆಸಿ 7 ದಿನಗಳ ಒಳಗಾಗಿ ವರದಿ ಸಲ್ಲಿಸಲು ಆದೇಶಿಸಲಾಗಿದೆ.

Leave a Comment