ರಿಪ್ಪನ್ಪೇಟೆ ; ಇಲ್ಲಿನ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸೀದಿಯವರು ಈದ್-ಉಲ್-ಫಿತ್ರ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.
ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ ಈದ್-ಉಲ್-ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿ ಹೊಸನಗರ ರಸ್ತೆಯ ಜುಮ್ಮಾ ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿನ ಖಬರ್ ಝಿಯಾರತ್ ನಡೆಯಿತು. ಆ ನಂತರ ಮುಸ್ಲಿಂ ಭಾಂದವರು ಪರಸ್ಪರ ಹಬ್ಬದ ಶುಭಾಶಯವನ್ನು ಅಪ್ಪಿಕೊಳ್ಳುವ ಮೂಲಕ ವಿನಿಮಯ ಮಾಡಿಕೊಂಡರು.
ಗಾಳಿಬೈಲು ; ಇಲ್ಲಿನ ಗಾಳಿಬೈಲು ಮೆಕ್ಕಾ ಮಸೀದಿಯವರು ರಂಜಾನ್ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಆಚರಿಸುವ ಮೂಲಕ ಖಬರ್ ಸ್ಥಾನಕ್ಕೆ ಮೆರವಣಿಗೆ ಮೂಲಕ ತೆರಳಿ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.

ಕಳೆದ ಒಂದು ತಿಂಗಳಿಂದ ರಂಜಾನ್ ಉಪವಾಸ ವ್ರತಾಚರಣೆ ಕೊನೆಗೊಂಡಿದರಿಂದ ಈದ್-ಉಲ್-ಫಿತ್ರ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.
ಗಾಳಿಬೈಲು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ ನಂತರ ಮೆರವಣಿಗೆ ಹೊರಟು ಗಾಳಿಬೈಲು ಖಬರ್ ಝಿಯಾರತ್ ನಡೆಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





