ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ರಿಪ್ಪನ್‌ಪೇಟೆ ನೂತನ ಪಿಎಸ್ಐ ಖಡಕ್ ಎಚ್ಚರಿಕೆ

Written by malnadtimes.com

Published on:

Ripponpete | ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ರಿಪ್ಪನ್‌ಪೇಟೆ ಪೊಲೀಸ್‌ ಠಾಣೆಯ (Ripponpete Police Station) ನೂತನ ಪಿಎಸ್‌ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು.

WhatsApp Group Join Now
Telegram Group Join Now
Instagram Group Join Now

Read More:PM Kissan Yojana | ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ಖಾತೆಗೆ ಬರಲ್ಲ ʻಪಿಎಂ ಕಿಸಾನ್‌ ಯೋಜನೆʼಯ 17ನೇ ಕಂತಿನ ಹಣ !

ರಿಪ್ಪನ್‌ಪೇಟೆ ಠಾಣೆಗೆ ವರ್ಗಾವಣೆಯಾಗಿ ಬಂದು ಅಧಿಕಾರ ಸ್ವೀಕರಿಸಿದ ನಂತರ ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಶಾಂತಿ ಸಮಿತಿ ಸಭೆ ಮತ್ತು ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕವಾಗಿ ಗ್ರಾಮದಲ್ಲಿನ ಮೂಲಭೂತ ಸಮಸ್ಯೆಗಳ ಕುರಿತು ಸಾರ್ವಜನಿಕರ ಅಹವಾಲು ಆಲಿಸಿ ಶೀಘ್ರವಾಗಿ ಪರಿಹರಿಸುವ ಬಗ್ಗೆ ಮುಂದಾಗುವುದಾಗಿ ಹೇಳಿದರು.

Ripponpete PSI
Ripponpete PSI

ಸಾರ್ವಜನಿಕರು ತೀರ್ಥಹಳ್ಳಿ – ಸಾಗರ ರಸ್ತೆ ಅಗಲೀಕರಣ ಸಂದರ್ಭದಲ್ಲಿ ವಿಳಂಬವಾಗುತ್ತಿರುವುದರ ಬಗ್ಗೆ ಮತ್ತು ತೀರ್ಥಹಳ್ಳಿ ರಸ್ತೆಯ ಬಾರ್ ಅಂಡ್ ರೆಸ್ಟೋರೆಂಟ್‌ ಬಳಿ ವಾಹನಗಳ ದಟ್ಟಣೆಯಿಂದಾಗಿ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿಂದೆ ತಾವು ಠಾಣಾಧಿಕಾರಿಯಾಗಿದ್ದಾಗ ನಾಲ್ಕು ರಸ್ತೆಯಲ್ಲಿ ಟ್ರಾಫಿಕ್ ಬಗ್ಗೆ ದಿನ ಬಿಟ್ಟು ದಿನ ಒಂದೊಂದು ಕಡೆಯಲ್ಲಿ ವಾಹನ ನಿಲುಗಡೆ ಮಾಡುವಂತೆ ಕಡ್ಡಾಯ ಜಾರಿಗೊಳಿಸಿದ್ದು ಈಗ ಅದು ಇಲ್ಲದಂತಾಗಿ ವಿದ್ಯಾರ್ಥಿಗಳು, ವಯೋವೃದ್ದರು, ಮಹಿಳೆಯರು ರಸ್ತೆ ದಾಟುವುದು ಕಷ್ಟಕರವಾಗಿದೆ. ಅಲ್ಲದೆ ಬಸ್ ನಿಲ್ದಾಣದಲ್ಲಿ ಕುಡುಕರ ಹಾವಳಿಯಿಂದ ಶಾಲಾ-ಕಾಲೇಜ್ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಸಾಕಷ್ಟು ದೂರುಗಳನ್ನು ಠಾಣಾಧಿಕಾರಿಗಳ ಗಮನಕ್ಕೆ ತರುತ್ತಿದ್ದಂತೆ ಇಂದಿನಿಂದಲೇ ಈ ಮೇಲ್ಕಂಡ ಹಲವು ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಭರವಸೆ ನೀಡಿ ಬಿಡಾಡಿ ಜಾನುವಾರಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಸಂಬಂಧಿಸಿದ ಮಾಲೀಕರನ್ನು ಪತ್ತೆ ಮಾಡಿ ಬಂದೋಬಸ್ತ್ ಮಾಡುವಂತೆ ತಿಳುವಳಿಕೆ ನೀಡಿ ನಂತರದಲ್ಲಿ ಕ್ರಮ ಜರುಗಿಸುವ ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾ.ಪಂ ಸದಸ್ಯರಾದ ಸುಂದರೇಶ್, ಆರ್.ವಿ.ನಿರೂಪ್ ಕುಮಾರ್, ಆಶೀಫ್ ಭಾಷಾ, ಜುಮ್ಮಾ ಮಸೀದಿ ಅಧ್ಯಕ್ಷ ಹಸನಬ್ಬ, ಎಂ.ಸುರೇಶ್‌ಸಿಂಗ್, ಕುಕ್ಕಳಲೇ ಈಶ್ವರಪ್ಪ, ಮಹಮ್ಮದ್, ಕ್ರಿಶ್ಚಿಯನ್ ಸಮುದಾಯದ ಮುಖಂಡ ವರ್ಗೀಶ್, ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಹಾಗೂ ಎಎಸ್‌ಐ ಮಂಜಪ್ಪ, ಸಿಬ್ಬಂದಿ ವರ್ಗದವರು ಹಾಜರಿದ್ದರು.

Read More:Karnataka Rain | ಇಂದು ಮತ್ತು ನಾಳೆ ಭಾರಿ ಮಳೆ ಸಾಧ್ಯತೆ, ಈ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Leave a Comment