ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಯ್ತು ಉಪನ್ಯಾಸಕನ ಮೃತದೇಹ !

Written by Mahesha Hindlemane

Published on:

ಭದ್ರಾವತಿ ; ಕಾಲೇಜು ಉಪನ್ಯಾಸಕನ ಮೃತದೇಹ ಅಡಿಕೆ ತೋಟದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಹನುಮಂತಾಪುರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಸುರೇಶ್ (58) ಮೃತ ಉಪನ್ಯಾಸಕ. ಶಿವಮೊಗ್ಗದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಅವರದ್ದೇ ತೋಟದಲ್ಲಿ ಶವ ಬೆಂಕಿ ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಬೆಂಕಿಯಲ್ಲಿ ದೇಹ ಉರಿಯುತ್ತಿರುವುದನ್ನು ಕಂಡು ಅಕ್ಕಪಕ್ಕದ ತೋಟದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಹೊಳೆಹೊನ್ನೂರು ಠಾಣೆ ಪೊಲೀಸರು ಬೆಂಕಿ ನಂದಿಸಿದ್ದಾರೆ. ಅಷ್ಟರಲ್ಲಿ ಮೃತದೇಹ ಭಾಗಶಃ ಸುಟ್ಟು ಹೋಗಿತ್ತು.

ಇದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬುದು ಪೊಲೀಸರ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Leave a Comment