ಶಿವಮೊಗ್ಗ ಜಿಲ್ಲಾ ಇಂಟೆಕ್ ಯೂತ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್‌ ಕುಮಾರ್ ಕೋಡೂರು ನೇಮಕ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ರಂಜಿತ್ ಕುಮಾರ್ ಕೋಡೂರು ಇವರನ್ನು ನೇಮಕ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷ ಸಂತೋಷ್ ಕುಮಾರ್ ರಂಜಿತ್ ಕುಮಾರ್ ಅವರಿಗೆ ನೇಮಕಾತಿ ಆದೇಶ ನೀಡಿ, ಯುವಕರಿಗೆ ಹೆಚ್ಚಿನ ಹೊಣೆಗಾರಿಕೆ ನೀಡುವ ಮೂಲಕ ಪಕ್ಷವನ್ನು ಬಲಪಡಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

ನೂತನ ಪದಾಧಿಕಾರಿ ಪಕ್ಷದ ಸಿದ್ಧಾಂತಗಳಿಗೆ ಬದ್ಧವಾಗಿ ಕಾರ್ಯನಿರ್ವಹಿಸಿ, ಕ್ಷೇತ್ರದಲ್ಲಿ ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ರಂಜಿತ್ ಕುಮಾರ್ ಮಾತನಾಡಿ, ತಮ್ಮ ಮೇಲೆ ಪಕ್ಷ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕಾರ್ಯನಿರ್ವಹಿಸುವುದಾಗಿ ತಿಳಿಸಿ, ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಮತ್ತಷ್ಟು ಬಲಗೊಳ್ಳಲು ಶ್ರಮಿಸುವುದಾಗಿ ತಿಳಿಸಿದ್ದಾರೆ.

ಕೃತಜ್ಞತೆ ;

ಉಪಾಧ್ಯಕ್ಷರಾಗಿ ನೇಮಕ ಮಾಡಿದ ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಅಧ್ಯಕ್ಷ ಸಂತೋಷ್ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್ ಪ್ರಸನ್ನ ಕುಮಾರ್, ಎಂ ಶ್ರೀಕಾಂತ್ ಅವರಿಗೆ ವಿಶೇಷವಾಗಿ ನಮ್ಮ ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ನಾಯಕರುಗಳಾದ ಡಾ. ಆರ್ ಎಂ ಮಂಜುನಾಥ್ ಗೌಡ, ಕಿಮ್ಮನೆ ರತ್ನಾಕರ್ ಹಾಗು ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ಚಂದ್ರಮೌಳಿ, ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯುವ ಸಂಘಟನೆಯ ಉಸ್ತುವಾರಿ ಕುರುವಳ್ಳಿ ನಾಗರಾಜ್ ಅವರಿಗೆ ನೂತನ ಜಿಲ್ಲಾ ಯುವ ಕಾಂಗ್ರೆಸ್ ಇಂಟೆಕ್ ವಿಭಾಗದ ಜಿಲ್ಲಾ ಉಪಾಧ್ಯಕ್ಷ ರಂಜಿತ್ ಕುಮಾರ್ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Leave a Comment