ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿನ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದ ಪ್ರದೇಶಕ್ಕೆ ಇಂದು ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಥಳದಿಂದಲೇ ಕೃಷಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ, ತಹಸೀಲ್ದಾರ್‌ರಿಗೆ ದೂರವಾಣಿ ಮೂಲಕ ಸಂಪರ್ಕಿಸಿ ತುರ್ತು ಪರಿಹಾರ ನೀಡುವಂತೆ ಒತ್ತಾಯಿಸಿದರು.
ಕಲ್ಲೂರು ಗ್ರಾಮದ ಸ.ನಂ 60 ರಲ್ಲಿ ಕೃಷಿ ಮಾಡುತ್ತಿದ್ದ ಬಡರೈತ ಷಣ್ಮುಖಪ್ಪ ಬಿನ್ ಕೃಷ್ಣಪೂಜಾರಿಗೆ ಸೇರಿದ ಜಾಗದಲ್ಲಿ ಈ ಅವಘಡ ಸಂಭವಿಸಿದೆ. ಸುಮಾರು 2 ಎಕರೆ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗಿತ್ತು. ಆದರೆ ದುರಾದೃಷ್ಟವಶಾತ್ ಸುಮಾರು 1.5 ಎಕರೆ ಪ್ರದೇಶದ ಕಬ್ಬು ಬೆಂಕಿಗಾಹುತಿಯಾಗಿ ಸಂಪೂರ್ಣ ಸುಟ್ಟು ಹೋಗಿದೆ.

ಬೆಂಕಿಯಿಂದಾಗಿ ಬೀಜದ ಕಬ್ಬು ನಾಶವಾಗಿರುವುದು ರೈತನಿಗೆ ಹೆಚ್ಚಿನ ನಷ್ಟವಾಗಿದೆ ಎಂದ ಅವರು, ಕೂಡಲೇ ಸರ್ಕಾರ ರೈತನಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರೈತ ಷಣ್ಮುಖಪ್ಪ ಕುಟುಂಬಕ್ಕೆ ಶಾಸಕ ಆರಗ ಜ್ಞಾನೇಂದ್ರ ಸಾಂತ್ವನ ಹೇಳಿ, ವೈಯಕ್ತಿಕ ಧನ ಸಹಾಯ ನೀಡಿ ಸರ್ಕಾರದಿಂದ ಹೆಚ್ಚಿನ ಪರಿಹಾರ ಕೊಡಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಆದರ್ಶ, ಗಂಗಾಧರ, ಅಗ್ನಿಶ್, ಸದಾನಂದ, ಅರುಣ್ ಇನ್ನಿತರರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





