ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ. ಪೋಷಕರು ಕೆಲಸದ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಕೃತ್ಯ ನಡೆದಿದೆ ಎನ್ನಲಾಗಿದೆ.
ಸಂಜೆ ಪೋಷಕರು ಮನೆಗೆ ಮರಳಿದಾಗ ಬಾಲಕಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಘಟನೆ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





