ಹೊಸನಗರ ; ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವುದು ಮುಂಬರುವ ದಿನಗಳಲ್ಲಿ ದೇಶದ ಶೈಕ್ಷಣಿಕ ಪ್ರಗತಿಯಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಮೇಲಿನಬೆಸಿಗೆಯ ಪಿಎಂಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಶಾಲೆಗಳ ಪ್ರಗತಿಯಾಗಿ ಪಿಎಂಶ್ರೀ ಯೋಜನೆಯಡಿ ವಿಶೇಷ ಅನುದಾನ ನೀಡುತ್ತಿದೆ. ಈ ಯೋಜನೆಯ ಸದುಪಯೋಗ ಪಡಿಸಿಕೊಂಡಲ್ಲಿ ಶಾಲೆಗಳ ಉನ್ನತೀಕರಣ ಸಾಧ್ಯ. ಹಳೆ ವಿದ್ಯಾರ್ಥಿಗಳು, ಪೋಷಕರು ಸಹಕಾರದಿಂದ ಇಂದು ಎಷ್ಟೋ ಸರ್ಕಾರಿ ಶಾಲೆಗಳು ಖಾಸಗಿ ಶಾಲೆಗಳಿಗಿಂತ ಉತ್ತಮ ಸಾಧನೆ ಮಾಡಿರುವುದು ಗಮನಾರ್ಹ. ಶಿಕ್ಷಣದಲ್ಲಿ ನೈತಿಕತೆ ಇಲ್ಲದಿದ್ದಲ್ಲಿ ಅಂತಹ ಶಿಕ್ಷಣ ಪಡೆಯುವುದು ವ್ಯರ್ಥ ಎಂದರು.
ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಶಾಲೆಗಳ ಅಭಿವೃದ್ಧಿಗೆ ಸಹಕಾರ ನೀಡಲು ತಾವು ಸದಾ ಸಿದ್ಧ. ಮಕ್ಕಳು ಶಿಕ್ಷಣ ವಂಚಿತರಾಗಬಾರದು. ಶಿಕ್ಷಣ ನೀಡುವ ಶಕ್ತಿ ಬೇರೆ ಯಾವ ಮಾರ್ಗದಿಂದಲೂ ಪಡೆಯಲು ಸಾಧ್ಯವಿಲ್ಲ ಎಂದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಡಿ ಸೋಮಶೇಖರ್, ಗ್ರಾಮ ಪಂಚಾಯತಿಯ ನಿಕಟಪೂರ್ವ ಸದಸ್ಯರಾದ ಜ್ಯೋತಿ ನಾಗರಾಜ್, ಲಕ್ಷ್ಮಣಗೌಡ, ಶಾಂತ ಪಾಂಡು, ನಾಗರಾಜ್, ಪೂರ್ಣಿಮ ಸೋಮಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ವೈ.ಗಣೇಶ್ ಶಿಕ್ಷಣ ಸಂಯೋಜಕ ಕರಿಬಸಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಸುರೇಶ್ ಶಾಲಾ ಸಮಿತಿ ಉಪಾಧ್ಯಕ್ಷೆ ನಾಗರತ್ನ, ಶಾಲಾ ಸಮಿತಿ ಅಧ್ಯಕ್ಷ ಬಿ.ಕೆ.ಸುರೇಶ್, ಮುಖ್ಯ ಶಿಕ್ಷಕ ಗುರುಮೂರ್ತಿ, ಧರ್ಮಪ್ಪ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ನಂತರದಲ್ಲಿ ನಡೆದ ಮಕ್ಕಳ ಸಾಂಸ್ಕೃತಿಕ ಕಾರ‍್ಯಕ್ರಮ ಕಲಾ ಸಿಂಚನ ಗಮನ ಸೆಳೆಯಿತು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





