ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷರ ಜಿಲ್ಲಾ ಪ್ರವಾಸ

Written by Mahesha Hindlemane

Published on:

ಶಿವಮೊಗ್ಗ ; ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆ ಸಮಿತಿ ಅಧ್ಯಕ್ಷ ಮೊಹಮ್ಮದ್ ತಬ್ರೇಝ್ ಅಲಂ ಶರೀಫ್‌ರವರು ಏ.20 ರಿಂದ 23ರವರೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಏ. 20 ರಂದು ಮಧ್ಯಾಹ್ನ 3.00ಕ್ಕೆ ಭದ್ರಾವತಿಗೆ ಆಗಮಿಸಿ ಭದ್ರಾವತಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಮಧ್ಯಾಹ್ನ 4.00ಕ್ಕೆ ದೊಡ್ಡೆರಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 6.00ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ಏ. 21 ರಂದು ಬೆಳಗ್ಗೆ 11.00ಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಲೆಶಂಕರದಲ್ಲಿ ಮೇ ತಿಂಗಳಲ್ಲಿ ನಡೆಯಲಿರುವ ಕಾರ್ಯಕ್ರಮದ ಬಗ್ಗೆ ಪೂರ್ವಬಾವಿ ಸಭೆ ನಡೆಸಲಿದ್ದಾರೆ. ಸಂಜೆ 4.00ಕ್ಕೆ ಹೊಸನಗರ ತಾಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಗ್ರಾಮೀಣ ಜನಗಳ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಹುಂಚ ಗ್ರಾಮದಲ್ಲಿ ಸ್ಥಳೀಯ ಜನರೊಂದಿಗೆ ಕುಂದುಕೊರತೆಗಳ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ ಹಾಗೂ ಕಾರ್ಗಲ್ ತೆರಳಿ ವಾಸ್ತವ್ಯ ಮಾಡಲಿದ್ದಾರೆ.

ಏ. 22 ರಂದು ಬೆಳಗ್ಗೆ ಜೋಗದ ಸರ್ಕ್ಯೂಟ್ ಹೌಸ್ ಸಭಾಂಗಣದಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ, ಸಾಗರ ಉಪವಿಭಾಗಾಧಿಕಾರಿ ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 2.00ಕ್ಕೆ ಉ.ಕ ಸಿದ್ದಾಪುರ ತಾಲೂಕಿನ ಗೇರುಸೊಪ್ಪೆ ಗ್ರಾಮದಲ್ಲಿ ಸ್ಥಳ ವೀಕ್ಷಣೆ ಹಾಗೂ ಸ್ಥಳೀಯರೊಂದಿಗೆ ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಣೆ ಮಾಡಲಿದ್ದಾರೆ. ಸಂಜೆ 6.00ಕ್ಕೆ ಮುರುಡೇಶ್ವರ, ಭಟ್ಕಳದಲ್ಲಿ ಅರಣ್ಯ ಅಧಿಕಾರಿಗಳೊಂದಿಗೆ ಸಮಾಲೋಚನೆ ಮಾಡಲಿದ್ದಾರೆ. ಸಂಜೆ 7.00ಕ್ಕೆ ಕೊಲ್ಲೂರಿಗೆ ತೆರಳಿ ವಾಸ್ತವ್ಯ ಮಾಡಲಿದ್ದಾರೆ.

ಏ. 23 ರಂದು ಬೆಳಗ್ಗೆ 10.00ಕ್ಕೆ ಕೊಲ್ಲೂರು ಹಾಗೂ ಬೆಳಗ್ಗೆ 11.00ಕ್ಕೆ ಸಿಗಂದೂರು ತೆರಳಿ ಅಲ್ಲಿನ ಸ್ಥಳೀಯರೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಕೊಡಚಾದ್ರಿ ತೆರಳಿ ಕೊಡಚಾದ್ರಿ ತೀರದ ಸ್ಥಳ ವೀಕ್ಷಣೆ ಮಾಡಲಿದ್ದಾರೆ. ಸಂಜೆ 4.30ಕ್ಕೆ ಚಕ್ರಾನಗರದ ಅರಣ್ಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಸಂಜೆ 6.30ಕ್ಕೆ ಬೆಂಗಳೂರಿಗೆ ವಾಪಾಸ್ಸು ತೆರಳಲಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment