ಏ. 24 ರಂದು ಗುಳಿಗುಳಿ ಶಂಕರೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಟಾ ವರ್ಧಂತ್ಯುತ್ಸವ, ಕುಂಬಾಭಿಷೇಕ ಕಲಾಹೋಮ, ಧರ್ಮ ಸಮಾರಂಭ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ಶ್ರೀ ಗುಳಿಗುಳಿಶಂಕರದ ಶ್ರೀಶಂಕರೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಶಿವಮೊಗ್ಗ ಅಂದಾಲ್ಸ್ ರಾಘುಭಟ್ ಪುರೋಹಿತ ತಂಡದವರ ಮತ್ತು ದೇವಸ್ಥಾನದ ಪ್ರಧಾನ ಅರ್ಚಕರ ನೇತೃತ್ವದಲ್ಲಿ 11ನೇ ವರ್ಷದ ಪ್ರತಿಷ್ಟಾ ವರ್ಧಂತ್ಯುತ್ಸವ ಅಂಗವಾಗಿ ವಿಶೇಷ ಪೂಜಾ ಕೈಂಕರ್ಯಗಳನ್ನು ಏರ್ಪಡಿಸಲಾಗಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ವಾಸುದೇವ್‌ಶೆಟ್ ಹಾಗೂ ಕಾರ್ಯದರ್ಶಿ ಅವಡೆ ಶಿವಪ್ಪ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಏಪ್ರಿಲ್ 24 ರಂದು ಶುಕ್ರವಾರ ಬೆಳಗ್ಗೆ 9 ಗಂಟೆಗೆ ಗುಳಿಗುಳಿಶಂಕರೇಶ್ವರ ಸ್ವಾಮಿಗೆ ಕುಂಭಾಭಿಷೇಕ ಮತ್ತು ಕಲಾಹೋಮ ಹಾಗೂ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ತೀರ್ಥ ಪ್ರಸಾದ ವಿತರಣೆ. ನಂತರ ಧರ್ಮಸಮಾರಂಭ ಈ ಕಾರ್ಯಕ್ರಮದ ದಿವ್ಯಸಾನ್ನಿಧ್ಯವನ್ನು ಹಾರ‍ನಹಳ್ಳಿ ರಾಮಲಿಂಗೇಶ್ವರಮಠದ ವಿಶ್ವರಾಧ್ಯಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಅಶೀರ್ವಚನ ನೀಡುವರು.

ಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನ ಸೇವಾ ಸಮಿತಿಯ ಆಧ್ಯಕ್ಷ ವಾಸುದೇವ್‌ಶೆಟ್ ವಹಿಸುವರು. ಮುಖ್ಯಅತಿಥಿಗಳಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಬೆಂಗಳೂರಿನ ಸೀತಾ ನಾಗರಾಜಕುಮಾರ್ ಭಾಗವಹಿಸುವರು ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಶ್ರೀಸ್ವಾಮಿಯ ಕೃಪಾಶೀರ್ವಾದ ಪಡೆಯುವಂತೆ ಮನವಿ ಮಾಡಿದ್ದಾರೆ.

Leave a Comment