ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಇಂಗ್ಲೀಷ್ ಮೀಡಿಯಂ ಪ್ರೌಢಶಾಲೆಯ ವಿದ್ಯಾರ್ಥಿನಿ ಸ್ನೇಹ ಎನ್ ಸಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 609 ಅಂಕ ಗಳಿಸಿ ಶೇ. 97.44 ಫಲಿತಾಂಶ ದಾಖಲಿಸಿದ್ದಾರೆ.
ಇವರು ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ, ನಾಗರಕೊಡಿಗೆ ವಾಸಿ ಎನ್.ಎಲ್. ಚಂದ್ರಶೇಖರ್ ಹಾಗೂ ಗೀತಾ ದಂಪತಿಗಳ ಪುತ್ರಿ. ವಿದ್ಯಾರ್ಥಿನಿ ಸ್ನೇಹ ಸಾಧನೆಗೆ ಶಾಲಾ ಮುಖ್ಯ ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಅಭಿನಂದಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





