ರಿಪ್ಪನ್ಪೇಟೆ ; ಮೊನ್ನೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಹರತಾಳು ಗ್ರಾಮದ ಮನೆಯೊಂದರ ಮೇಲೆ ಮರ ಉರುಳಿಬಿದ್ದು ಅಪಾರ ಹಾನಿ ಸಂಭವಿಸಿದ ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸರ್ಕಾರದಿಂದ ತಕ್ಷಣ ಪರಿಹಾರ ಕೊಡಿಸುವುದಾಗಿ ಹೇಳಿ ತಮ್ಮ ವೈಯಕ್ತಿಕ ಧನ ಪರಿಹಾರವನ್ನು ನೀಡಿದರು.

ಇನ್ನೂ ಚಿಕ್ಕಜೇನಿ, ಕೋಡೂರು ಗ್ರಾಪಂ ವ್ಯಾಪ್ತಿಯ ಮಳೆ ಹಾನಿ ಪ್ರದೇಶಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿ ವೈಯಕ್ತಿಕ ಧನ ಸಹಾಯ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಭರತ್ರಾಜ್, ಮೆಸ್ಕಾಂ ಎಇಇ ಚಂದ್ರಶೇಖರ್, ಆರ್.ಎಫ್.ಒ ಅನಿಲ್ ಕುಮಾರ್, ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಚಿದಂಬರ್, ಪ್ರಚಾರ ಸಮಿತಿ ಅಧ್ಯಕ್ಷ ಹರತಾಳು ಜಯಶೀಲಪ್ಪಗೌಡ ಇನ್ನಿತರರು ಹಾಜರಿದ್ದರು.






ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





