ವಸತಿ ಶಾಲೆಗಳ 7 ಮತ್ತು 8ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

Written by Mahesha Hindlemane

Published on:

ಶಿವಮೊಗ್ಗ : 2026-27ನೇ ಶೈಕ್ಷಣಿಕ ಸಾಲಿಗಾಗಿ ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ವಿಭಾಗವು ಕೆಪಿಎಸ್‌ಸಿಎಸ್‌ಎಂ ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳ 7 ಮತ್ತು 8ನೇ ತರಗತಿಗಳ ಪ್ರವೇಶ ಪರೀಕ್ಷೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ. ಬಿ.ಆರ್. ಅಂಬೇಡ್ಕರ್, ಶ್ರೀಮತಿ ಇಂದಿರಾ ಗಾಂಧಿ ಮತ್ತು ಶ್ರೀ ನಾರಾಯಣ ಗುರು ವಸತಿ ಶಾಲೆಗಳ ಮಧ್ಯಂತರ ದಾಖಲೆಗಾಗಿ ಈ ಪ್ರವೇಶ ಪರೀಕ್ಷೆ ನಡೆಯಲಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಸಾಮಾನ್ಯ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳು 01 ಜೂನ್ 2026ರಿಂದ 12 ಜೂನ್ 2026 ರವರೆಗೆ ಹತ್ತಿರದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಪರೀಕ್ಷೆ 20 ಜೂನ್ 2026 ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಿಗದಿತ ತಾಲ್ಲೂಕು ಮಟ್ಟದ ಕೇಂದ್ರಗಳಲ್ಲಿ ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ವಿವರಗಳು ಈ ಕೆಳಗಿನಂತಿವೆ:

  • ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಕುಂಸಿ, ಶಿವಮೊಗ್ಗ ತಾಲ್ಲೂಕು
  • ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಹುಣಸೇಕಟ್ಟೆ, ಭದ್ರಾವತಿ ತಾಲ್ಲೂಕು
  • ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ತಾಳಗುಪ್ಪ, ಸಾಗರ ತಾಲ್ಲೂಕು
  • ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ, ಅಗ್ರಹಾರ, ತೀರ್ಥಹಳ್ಳಿ ತಾಲ್ಲೂಕು
  • ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, ಗೇರುಪುರ, ಹೊಸನಗರ ತಾಲ್ಲೂಕು
  • ಶ್ರೀ ನಾರಾಯಣ ಗುರು ವಸತಿ ಶಾಲೆ, ಹಿರೇಶಕುಣ, ಸೊರಬ ತಾಲ್ಲೂಕು
  • ಮೊರಾರ್ಜಿ ದೇಸಾಯಿ ವಸತಿ ಶಾಲೆ, ಮಳವೂರು, ಶಿಕಾರಿಪುರ

ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ಮಾಹಿತಿಗಾಗಿ ತಮ್ಮ ಹತ್ತಿರದ ವಸತಿ ಶಾಲೆಗಳ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ತಿಳಿಸಿದ್ದಾರೆ.

Leave a Comment