ಹೊಸನಗರದಲ್ಲಿ ಮೇ 30ರಂದು ಉಚಿತ ಕಣ್ಣಿನ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ

Written by Mahesha Hindlemane

Published on:

ಹೊಸನಗರ : ಮೇ 30ರ ಶನಿವಾರ ಹೊಸನಗರದ ಸೀತಾರಾಮಚಂದ್ರ ಸಭಾಭವನದ ಆವರಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘ, ಶಿವಮೊಗ್ಗದ ಐದೃಷ್ಟಿ ಕಣ್ಣಿನ ಆಶ್ರಯ ಹಾಗೂ ಕೋಟೆಗಾರ್ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ವಿಶೇಷ ಸಂಚಾರಿ ವಾಹನದ ಮೂಲಕ ಉಚಿತ ಕಣ್ಣಿನ ತಪಾಸಣೆ ಮತ್ತು ರಿಯಾಯಿತಿ ದರದಲ್ಲಿ ಕನ್ನಡಕ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಮಾವಿನಕೊಪ್ಪ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಹೆಚ್.ಜಿ. ಪ್ರವೀಣ್ ಕುಮಾರ್ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಶಿಬಿರದಲ್ಲಿ ಕಣ್ಣಿನ ಸಂಪೂರ್ಣ ತಪಾಸಣೆ ನಡೆಸಲಾಗಿದ್ದು, ಕಣ್ಣಿನ ದೋಷ ಪತ್ತೆಯಾಗಿದ್ದವರಿಗೆ ಕಣ್ಣಿನ ಪೊರೆ ಹಾಗೂ ಇತರೆ ಚಿಕಿತ್ಸೆಗಳನ್ನು ವಿಶೇಷ ರಿಯಾಯಿತಿಯಲ್ಲಿ ನೀಡಲಾಗುತ್ತದೆ. ಯಶಸ್ವಿನಿ, ಸಂಪೂರ್ಣ ಸುರಕ್ಷಾ ಯೋಜನೆ ಹಾಗೂ ಆರೋಗ್ಯ ರಕ್ಷಾ ಕಾರ್ಡ್ ಹೊಂದಿರುವವರಿಗೆ ಶಸ್ತ್ರಚಿಕಿತ್ಸೆ ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಕಾರ್ಯಕ್ರಮದ ಪ್ರಮುಖ ಉದ್ದೇಶವು ಕಣ್ಣಿನ ಸಮಸ್ಯೆ ಇರುವವರಿಗೆ ತ್ವರಿತ ವೈದ್ಯಕೀಯ ನೆರವು ನೀಡುವುದು ಹಾಗೂ ಅವರ ಆರೋಗ್ಯವನ್ನು ಸುಧಾರಿಸುವುದು ಎಂದಾಗಿ ವಿವರಿಸಿದ ಅವರು, ಈ ಸೌಲಭ್ಯವನ್ನು ಅಗತ್ಯವಿರುವವರು ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕರಿಸುವಂತೆ ಸಾರ್ವಜನಿಕರನ್ನು ವಿನಂತಿಸಿದ್ದಾರೆ‌.

ಈ ಮೂಲಕ ಹೊಸನಗರದಲ್ಲಿ ಕಣ್ಣಿನ ಆರೋಗ್ಯ ಕುರಿತು ಜಾಗೃತಿ ಮೂಡಿಸುವ ಮತ್ತು ಸಮಗ್ರ ಚಿಕಿತ್ಸೆಯನ್ನು ನೀಡುವ ಮಹತ್ವದ ಕಾರ್ಯಕ್ರಮ ನಡೆಯಲಿದೆ.

Leave a Comment