ಶಿವಮೊಗ್ಗ : ತಾಲೂಕಿನ ಸುತ್ತುಕೋಟೆಯ ಪೆಟ್ರೋಲ್ ಬಂಕ್ ಮುಂಭಾಗ ಗುರುವಾರ ಸಂಜೆ ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಮುಖಾಮುಖಿ ಅಪಘಾತ ಸಂಭವಿಸಿದೆ. ಈ ಘಟನೆದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ಮೃತನನ್ನು ಅಬ್ನಾನ್ (23) ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್ ಶಿಕಾರಿಪುರದಿಂದ ಶಿವಮೊಗ್ಗ ಕಡೆಗೆ ಪ್ರಯಾಣಿಸುತ್ತಿತ್ತು. ಬೈಕ್ ಸವಾರರು ಶಿವಮೊಗ್ಗದಿಂದ ಶಿಕಾರಿಪುರದ ಕಡೆಗೆ ತೆರಳುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಸುತ್ತುಕೋಟೆಯ ಶ್ರೀ ಸಪ್ತಕೋಟಿ ಪೆಟ್ರೋಲ್ ಬಂಕ್ ಬಳಿ ಬೈಕ್ ಬಸ್‌ನ ಮುಂಭಾಗಕ್ಕೆ ನೇರವಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬೈಕಿಗೆ ಬೆಂಕಿ ಹತ್ತಿಕೊಂಡಿತು. ಈ ಬೆಂಕಿ ಕಾರಣದಿಂದ ಬೈಕ್ ಸವಾರರ ದೇಹಕ್ಕೂ ಬೆಂಕಿ ಹತ್ತಿರುವುದಾಗಿ ತಿಳಿದು ಬಂದಿದೆ.

ಅಪಘಾತದಿಂದಾಗಿ ಬಸ್‌ನ ಪ್ರಯಾಣಿಕರು ಎಮರ್ಜೆನ್ಸಿ ಬಾಗಿಲು ಮತ್ತು ಕಿಟಕಿಗಳಿಂದ ಹೊರಗೆ ಹೊರಬಂದಿದ್ದಾರೆ. ಈ ಘಟನೆ ಕಾರಣದಿಂದ ಸವಳಂಗ ರಸ್ತೆ ಕೆಲ ನಿಮಿಷಗಳ ಕಾಲ ಸಂಚಾರ ನಿರ್ಬಂಧಿತಗೊಂಡಿತ್ತು.
ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಡಿವೈಎಸ್‌ಪಿ ಸಂಜೀವ್ ಕುಮಾರ್, ಕುಂಸಿ ಠಾಣೆಯ ಪಿಎಸ್‌ಐ ಪಾರ್ವತಿ ಬಾಯಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





