ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಮೃತರಿಗೆ ಮೂರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಹುಚ್ಚಶೆಟ್ಟಿ ಮೂಲತಃ ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡವರಾಗಿದ್ದು ನಂತರ ಕೃಷಿ ಗುತ್ತಿಗೆ ಸೇರೆಗಾರಿಕೆ ನಡೆಸಿ ಜನಾನುರಾಗಿಯಾಗಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





