Chikkamagaluru | ಇ-ಸ್ವತ್ತು ಮಾಡಿಕೊಡಲು ಲಂಚದ (Bribe) ಬೇಡಿಕೆ ಇಟ್ಟು ಫೋನ್ ಪೇ (Phone Pay) ಮೂಲಕ ಹಣ ಹಾಕಿಸಿಕೊಂಡು ಮತ್ತಷ್ಟು ಹಣ ಪೀಕಲು ಪ್ಲಾನ್ ಮಾಡಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ (Lokayuktha) ಬಲೆಗೆ ಬಿದ್ದಿದ್ದಾನೆ. ಚಿಕ್ಕಮಗಳೂರು (Chikkamagaluru) ನಗರಸಭೆ ವಾರ್ಡ್ 2ರ ಬಿಲ್ ಕಲೆಕ್ಟರ್ ಪ್ರದೀಪ್ ಸಿಕ್ಕಿಬಿದ್ದಿದ್ದಾನೆ.
Read More:Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !
ಸದಾಶಿವಮೂರ್ತಿ ಎಂಬುವವರ ಬೈಪಾಸ್ ರಸ್ತೆಯ ಜಾಗದ ಇ-ಸ್ವತ್ತು ಮಾಡಿಕೊಡಲು ಚಿಕ್ಕಮಗಳೂರು ನಗರಸಭೆ ವಾರ್ಡ್2 ಬಿಲ್ ಕಲೆಕ್ಟರ್ ಪ್ರದೀಪ್ ಲಂಚ ಪಡೆಯುವ ವೇಳೆ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದಾನೆ.
ಸದಾಶಿವಮೂರ್ತಿ ಮಗ ರಾಕೇಶ್ ನೀಡಿದ ದೂರಿನ ಮೇರೆಗೆ ಇಂದು ಕಾರ್ಯಾಚರಣೆ ನಡೆಸಿದ ಲೋಕಾ ಇನ್ಸ್‌ಪೆಕ್ಟರ್ ಅನಿಲ್ ರಾಥೋಡ್ ಹಾಗೂ ಮಲ್ಲಿಕಾರ್ಜುನ ನೇತೃತ್ವದ ತಂಡ ಪ್ರದೀಪ್ ನನ್ನು ನಗರಸಭೆ ಕಚೇರಿ ಎದುರು ಬಂಧಿಸಿದ್ದಾರೆ.

ಫೋನ್ ಪೇ ಮೂಲಕ ರಾಕೇಶ್ ಮೊಬೈಲ್ ನಿಂದ ಮೊದಲಿಗೆ 3 ಸಾವಿರ ರೂ. ಹಾಕಿಸಿಕೊಂಡಿದ್ದ ಪ್ರದೀಪ್ ನಂತರ ನಗದು 2 ಸಾವಿರ ರೂ. ಹಾಗೂ ಇದೀಗ ಮತ್ತೆ 2 ಸಾವಿರ ರೂ. ಗಳಿಗೆ ಬೇಡಿಕೆ ಇಟ್ಟಿದ್ದು ಅದನ್ನು ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.
ಕಾರ್ಯಾಚರಣೆ ತಂಡದಲ್ಲಿ ಲೋಕಾಯುಕ್ತ ಪೊಲೀಸರಾದ ಅನಿಲ್ ನಾಯಕ್ ಲೋಕೇಶ್, ವಿಜಯಭಾಸ್ಕರ್, ಶ್ರೀಧರ್ ಪ್ರಸಾದ್ ಚಂದನ್ ಭಾಗಿಯಾಗಿದ್ದರು.
Read More:Dengue | ಡೆಂಗ್ಯೂಗೆ ಆರೋಗ್ಯ ಇಲಾಖೆ ಸಿಬ್ಬಂದಿ ಬಲಿ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.