ಶಿವಮೊಗ್ಗ : ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Written by Mahesha Hindlemane

Published on:

ಶಿವಮೊಗ್ಗ : ಜಿಲ್ಲಾಧಿಕಾರಿ ಪೊಲೀಸ್ ಇಲಾಖೆ ಜುಲೈ 2026 ರಲ್ಲಿ ನಾಗರಿಕರಿಗೆ ವಿಶೇಷ ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸುವುದಾಗಿ ಘೋಷಿಸಿದ್ದು ಈ ಶಿಬಿರದಲ್ಲಿ ಪಾಲ್ಗೊಳ್ಳಲು ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಅರ್ಜಿ ನಮೂನೆಗಳನ್ನು ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಾಗೂ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯಲ್ಲಿ ಪಡೆಯಬಹುದು.

ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ಬಳಿಕ, ಇತ್ತೀಚಿನ ಎರಡು ಭಾವಚಿತ್ರಗಳು ಮತ್ತು ಆಧಾರ್ ಕಾರ್ಡ್ ನಕಲಿನೊಂದಿಗೆ ತಮ್ಮ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಸಲ್ಲಿಸುವಂತೆ ಎಸ್‌ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment