ಹೊಸನಗರ : ಶಿವಮೊಗ್ಗ-ಉಡುಪಿ ಗಡಿಯ ಬಾಳೆಬರೇ ಘಾಟಿಯಲ್ಲಿ ಇಂದು ಶ್ರೀ ದುರ್ಗಾಂಬ ಬಸ್ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಈ ಬಸ್ ಘಾಟಿಯಿಂದ ಕುಂದಾಪುರ ಕಡೆಗೆ ಪ್ರಯಾಣಿಸುತ್ತಿತ್ತು.

ಆದೃಷ್ಟವಶಾತ್, ಬಸ್ನಲ್ಲಿ ಇದ್ದ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸಮಯಕ್ಕೆ ಸುರಕ್ಷಿತವಾಗಿ ಹೊರಬಂದಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳ ಮಾಹಿತಿ ವರದಿಯಾಗಿಲ್ಲ. ಬೆಂಕಿ ಕಾಣಿಸಿಕೊಂಡ ಕಾರಣವನ್ನು ತಿಳಿದುಕೊಳ್ಳಲು ತನಿಖೆ ನಡೆಯುತ್ತಿದೆ.

ಈ ಘಟನೆ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದು ಸದ್ಯದಲ್ಲಿ ಹೆಚ್ಚಿನ ವಿವರಗಳು ಬರುವ ನಿರೀಕ್ಷೆಯಿದೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/r/18vCstxZNV/

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





