ಶಿವಮೊಗ್ಗ : ಹೊಸಮನೆ ದೊಡ್ಡಮ್ಮ ದೇವಸ್ಥಾನದ ಬಳಿ ಶನಿವಾರ ಸಂಜೆ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.
ಮೃತನನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (45) ಎಂದು ಗುರುತಿಸಲಾಗಿದೆ. ಅವರಿಗೆ ಪತ್ನಿ ಮತ್ತು ಇಬ್ಬರು ಮಕ್ಕಳಿದ್ದು, ಶುಕ್ರವಾರ ದೇವಸ್ಥಾನದ ಕಾಮಗಾರಿಯಲ್ಲಿ ಕೆಲಸ ಮಾಡಲು ಶಿವಮೊಗ್ಗಕ್ಕೆ ಬಂದಿದ್ದರು.
ಕಾರ್ಮಿಕರು ಕೆಲಸ ಮಾಡುವ ವೇಳೆ ಕ್ರೇನ್ ಚಾಲಕನ ಅಜಾಗರೂಕತೆಯಿಂದ ನಾಗೇಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಈ ಘಟನೆ ಸ್ಥಳದಲ್ಲಿ ಆತಂಕದ ವಾತಾವರಣವನ್ನು ಉಂಟುಮಾಡಿತು.
ಘಟನೆಯ ಬಗ್ಗೆ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





