ರಿಪ್ಪನ್ಪೇಟೆ : ಹರತಾಳು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಹುಣಸವಳ್ಳಿ ಪ್ರಗತಿಪರ ಕೃಷಿಕ ಹೆಚ್.ಚಂದ್ರಶೇಖರಪ್ಪಗೌಡ ಹುಣಸವಳ್ಳಿ (85) ತಮ್ಮ ಸ್ವಗೃಹದಲ್ಲಿ ಮಂಗಳವಾರ ಸಂಜೆ ನಿಧನ ಹೊಂದಿದರು.
ಮೃತರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದು ಹೊಸನಗರ ತಾಲ್ಲೂಕ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಹೊಸನಗರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಸಂತಾಪ :
ವೀರಶೈವ ಸಮಾಜದ ಹಿರಿಯ ಮುಖಂಡರಾಗಿದ್ದ ಇವರು ಅತ್ಯಂತ ಸರಳ ಸಜ್ಜನಿಕ ವ್ಯಕ್ತಿತ್ವ ಹೊಂದಿರುವ ನಿಷ್ಟಾವಂತ ನಾಯಕರಾಗಿದ್ದು ಇವರ ನಿಧನದಿಂದ ಸಮಾಜಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಸಂಸ್ಥಾನಮಠದ ಡಾ.ಜಗದ್ಗುರು ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ, ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ, ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ, ಶಾಸಕ ಗೋಪಾಲಕೃಷ್ಣ ಬೇಳೂರು, ಮಾಜಿ ಶಾಸಕರಾದ ಬಿ.ಸ್ವಾಮಿರಾವ್, ಡಾ.ಜಿ.ಡಿ.ನಾರಾಯಣಪ್ಪ, ರಿಪ್ಪನ್ಪೇಟೆ ಶ್ರೀಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಡಾ.ಕೆ.ಬಿ.ಕಮಲಾಕ್ಷಪ್ಪ, ಉಪಾಧ್ಯಕ್ಷ ಜಿ.ಎಂ.ದುಂಡರಾಜಪ್ಪಗೌಡ, ಎಂ.ಆರ್. ಶಾಂತವೀರಪ್ಪಗೌಡ, ಎಲ್.ವೈ.ದಾನೇಶಪ್ಪ, ಡಿ.ಎಸ್.ರಾಜಾಶಂಕರ್, ಒಕ್ಕಲಿಗ ಸಮಾಜದ ತಾಲ್ಲೂಕ್ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ, ಅಖಿಲಭಾರತ ವೀರಶೈವ ಲಿಂಗಾಯಿತ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಉಮೇಶ್, ಜಿಲ್ಲಾ ಪಂಚಾಯಿತ್ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್, ಹೊಸನಗರ ಎಪಿಎಂಸಿ ಮಾಜಿ ಅಧ್ಯಕ್ಷ ಹೆಚ್.ವಿ.ಈಶ್ವರಪ್ಪಗೌಡ, ಹೊಸನಗರ ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಹರತಾಳು ಗ್ರಾಮ ಪಂಚಾಯಿತ್ ಮಾಜಿ ಸದಸ್ಯ ಶಿವಮೂರ್ತಿ ಮತ್ತು ಸಾಕಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿ ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಮತ್ತು ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





