ಸಾಗರ : ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕರೂರು ಹೋಬಳಿ ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದ 6 ವರ್ಷದ ತ್ರಿಲೋಕ್ ಜೈನ್ ಶನಿವಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ.
ಶಾಲಾ ಆವರಣದಲ್ಲಿ ಮಧ್ಯಾಹ್ನ ಶಾಲೆಯ ಮುಕ್ತಾಯದ ಸಮಯದಲ್ಲಿ ತ್ರಿಲೋಕ್ ಏಕಾಏಕಿ ಕುಸಿದು ಬಿದ್ದಿದ್ದು, ಅವನನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರೂ, ಮಾರ್ಗ ಮಧ್ಯೆ ಪ್ರಾಣಪಕ್ಷಿ ಹಾರಿಹೋಗಿದೆ. ಈತ ಗೌತಮ್ ಜೈನ್ ಮತ್ತು ಶಿಲ್ಪಾ ದಂಪತಿಯ ಪುತ್ರ.
ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ಮುಖ್ಯ ಶಿಕ್ಷಕರು ಕಂಬನಿ ಮಿಡಿದಿದ್ದಾರೆ. ತ್ರಿಲೋಕ್ ನಿಧನದಿಂದ ಶಾಲೆ ಮತ್ತು ಗ್ರಾಮದಲ್ಲಿ ದುಃಖ ಮಡುಗಟ್ಟಿದೆ.