ಶಿವಮೊಗ್ಗ : ಗಾಜನೂರಿನ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಜವಾಹರ್ ನವೋದಯ ವಿದ್ಯಾಲಯದ ಕಾರ್ಯಾಲಯಕ್ಕೆ ಜೂನ್ 25ರೊಳಗಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಲು ಪ್ರಾಂಶುಪಾಲರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು 2025-26ನೇ ಸಾಲಿನಲ್ಲಿ 10ನೇ ತರಗತಿ ಪರೀಕ್ಷೆಯನ್ನು ಉತ್ತೀರ್ಣರಾಗಿರಬೇಕು. ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಕನಿಷ್ಠ 60% ಅಂಕಗಳನ್ನು ಹೊಂದಿರಬೇಕು. ಜೊತೆಗೆ, ವಿದ್ಯಾರ್ಥಿಗಳು 2009ರ ಜೂನ್ 1 ರಿಂದ 2011ರ ಜುಲೈ 31ರ ನಡುವೆ ಹುಟ್ಟಿರಬೇಕು.
ಹೆಚ್ಚಿನ ವಿವರಗಳಿಗಾಗಿ ವಿದ್ಯಾಲಯದ ಅಧಿಕೃತ ಇ-ಮೇಲ್ ವಿಳಾಸ [email protected] ಅಥವಾ ಅಧಿಕೃತ ವೆಬ್ಸೈಟ್ https://navodaya.gov.in/nvs/nvs-school/SHIMOGA/en/home/index.html ಗೆ ಭೇಟಿ ನೀಡಬಹುದು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





