ತೀರ್ಥಹಳ್ಳಿ : ತಾಲೂಕಿನ ಅಕ್ಲಾಪುರ ಗ್ರಾಮದಲ್ಲಿ ಅಕ್ರಮವಾಗಿ ನಾಡ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸುವ ಘಟನೆ ನಡೆದಿದೆ.
ಸುಧಾಕರ ಆಚಾರಿ (39) ಬಂಧಿತ ಆರೋಪಿ ಎಂದು ಇಲಾಖೆ ಜೂನ್ 21 ರಂದು ಬಿಡುಗಡೆ ಮಾಡಿದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಅಕ್ಲಾಪುರ ಗ್ರಾಮದಲ್ಲಿ ನಾಡ ಬಂದೂಕು ತಯಾರಿಕೆಯ ಬಗ್ಗೆ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ, ಆರೋಪಿಯಿಂದ ನಾಡ ಬಂದೂಕನ್ನು ವಶಪಡಿಸಿಕೊಂಡಿರುವ ಬಗ್ಗೆ ಮಾಹಿತಿ ನೀಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಆಯುಧ ಕಾಯ್ದೆಯ 3, 5 ಮತ್ತು 25ನೇ ಕಲಂಗಳ ಅಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಡಿವೈಎಸ್ಪಿ ಅರವಿಂದ ಕಲಗುಜ್ಜಿಯ ಮಾರ್ಗದರ್ಶನದಲ್ಲಿ ಸಬ್ ಇನ್ಸ್ಪೆಕ್ಟರ್ ಆರ್ ಸುಷ್ಮಾ ಹಾಗೂ ಸಿಬ್ಬಂದಿಗಳಾದ ಲಿಂಗೇಗೌಡ, ಪ್ರವೀಣ ಕುಮಾರ್, ಪರಮೇಶ್ ನಾಯ್ಕ್, ದೀಪಕ್, ದೀಪಕ್ ಕೆ ಪಿ, ಪ್ರಮೋದ್ ಜಿ, ರಾಘವೇಂದ್ರ ಮತ್ತು ಮೋಹನ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





