ತೀರ್ಥಹಳ್ಳಿ ; ಆಗುಂಬೆ-ತೀರ್ಥಹಳ್ಳಿ ರಾಜ್ಯ ಹೆದ್ದಾರಿಯ ಬಾಳೆಬೈಲು ಸಮೀಪದ ಶಿವರಾಜಪುರದಲ್ಲಿ ಭಾನುವಾರ ಸಂಜೆ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿತು. ಈ ಅಪಘಾತದಲ್ಲಿ ಎರಡೂ ಕಾರುಗಳ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ತೀರ್ಥಹಳ್ಳಿ ಕಡೆಗೆ ಹೋಗುತ್ತಿದ್ದ ರಿಟ್ಜ್ ಕಾರು ಮತ್ತು ಉಡುಪಿ ಕಡೆಗೆ ಬರುತ್ತಿದ್ದ ಇನ್ನೋವಾ ಕಾರು ನಡುವೆ ಈ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಎರಡೂ ಕಾರುಗಳಲ್ಲಿದ್ದ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ತೀರ್ಥಹಳ್ಳಿಯ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಯಿತು. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನೋವಾ ಕಾರು ದಾವಣಗೆರೆ ಮೂಲದವರೆಂದು ಮತ್ತು ರಿಟ್ಜ್ ಕಾರು ತೀರ್ಥಹಳ್ಳಿಯ ಕುರುವಳ್ಳಿ ಗ್ರಾಮದವರಿಗೆ ಸೇರಿದ್ದು ಎಂದು ತಿಳಿದುಬಂದಿದೆ. ತೀರ್ಥಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





