ತೀರ್ಥಹಳ್ಳಿ : ತಾಲ್ಲೂಕಿನ ಲಕ್ಕುಂದ ಸಮೀಪದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಯುವಕನೊಬ್ಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಪತ್ರೊಡೆಗಾಗಿ ಮರಗೆಸ ಎಲೆ ಕೀಳಲು ಮರ ಏರಿದ್ದ ಪಟ್ಟಣದ ಇಂದಿರಾನಗರ ನಿವಾಸಿ ಅಭಿಷೇಕ್ ಶೆಟ್ಟಿ (32) ಆಕಸ್ಮಿಕವಾಗಿ ಹೈ-ಟೆನ್ಷನ್ (11KV) ವಿದ್ಯುತ್ ತಂತಿಗೆ ಸ್ಪರ್ಶಿಸಿ ಮರದಲ್ಲೇ ಮೃತಪಟ್ಟಿದ್ದಾನೆ.
ಮಲೆನಾಡಿನಲ್ಲಿ ಪತ್ರೊಡೆ ಜನಪ್ರಿಯ ಖಾದ್ಯವಾಗಿದ್ದು, ಅಭಿಷೇಕ್ ಸಹ ಅದಕ್ಕಾಗಿ ಮರ ಏರಿ ಎಲೆಗಳನ್ನು ಕೀಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮರದ ಸಮೀಪದ ಹೈ-ಟೆನ್ಷನ್ ವಿದ್ಯುತ್ ತಂತಿ ಆಕಸ್ಮಿಕವಾಗಿ ಸ್ಪರ್ಶಿಸಿದ್ದು ವಿದ್ಯುತ್ ಪ್ರವಾಹಕ್ಕೆ ಒಳಗಾಗಿ ಮರದ ಮೇಲೆಯೇ ಸಾವನ್ನಪ್ಪಿದ್ದಾನೆ.

ಈತನಿಗೆ ತಂದೆ-ತಾಯಿ ಇರಲಿಲ್ಲ. ತನ್ನ ಚಿಕ್ಕಮನ ಮಗಳ ಮನೆಯಲ್ಲಿ ವಾಸವಾಗಿದ್ದನು. ಇತ್ತೀಚೆಗಷ್ಟೇ ಮದುವೆಯಾಗಿದ್ದ ಅಭಿಷೇಕ್ ದಾಂಪತ್ಯ ಜೀವನವನ್ನು ಆರಂಭಿಸಿ ಹೊಸ ಕನಸುಗಳನ್ನು ಹೊತ್ತಿದ್ದು ಈತನ ದಾರುಣ ಅಂತ್ಯದಿಂದ ಕುಟುಂಬಸ್ಥರು ಶೋಕ ಸಾಗರದಲ್ಲಿ ಮುಳುಗುವಂತಾಗಿದೆ.
ಘಟನೆಯ ಮಾಹಿತಿ ತಿಳಿದು ತಕ್ಷಣ ಆಗುಂಬೆ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





