Ripponpete | ಅರಣ್ಯ (Forest) ಪ್ರದೇಶದಲ್ಲಿ ನಾಲ್ಕೈದು ಕಾಡುಕೋಣಗಳ (Bison) ಕಳೇಬರ ಪತ್ತೆಯಾಗಿದ್ದು ದುಷ್ಕರ್ಮಿಗಳು (Hunters Arrest) ಬೇಟೆಯಾಡಿರುವ ಶಂಕೆ ವ್ಯಕ್ತವಾಗಿದೆ.
ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹುಂಚ ಸಮೀಪದ ನಾಗರಹಳ್ಳಿ ಗ್ರಾಮದಲ್ಲಿ ಅಕ್ರಮ ಬಂದೂಕು ಬಳಸಿ ಕಾಡುಕೋಣಗಳ ಹತ್ಯೆ ಮಾಡಿರುವುದಾಗಿ ತಿಳಿದುಬಂದಿದೆ.

ನಾಲ್ಕೈದು ಕಾಡುಕೋಣಗಳ ಕಳೇಬರ ಪತ್ತೆಯಾಗಿದ್ದು, ಸ್ಥಳಕ್ಕೆ ಸಾಗರ ಡಿಎಫ್‌ಓ ಸಂತೋಷ್ ಕೆಂಚಣ್ಣನವರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪರೀಕ್ಷೆಗಾಗಿ ಕಾಡುಕೋಣಗಳ ಕಳೇಬರಗಳನ್ನು ಲ್ಯಾಬ್‌ಗೆ ಕಳುಹಿಸಲಾಗಿದೆ.
ಆರೋಪಿಗಳು ಕಾಡುಕೋಣಗಳ ಮಾಂಸಕಾಗಿ ಬೇಟೆಯಾಡಿರುವ ಸಾಧ್ಯತೆ ಇದ್ದು, ಸದ್ಯ ಅರಣ್ಯಾಧಿಕಾರಿಗಳು ಕಾಡುಕೋಣಗಳ ಹತ್ಯೆ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
Read more:ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ವಿಜಯೇಂದ್ರ ಸಂತಾಪ

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.