ಶಿಕಾರಿಪುರ : ತಾಲ್ಲೂಕಿನ ಗಾಮ ಗ್ರಾಮದಲ್ಲಿ ಕಾಡು ಹಂದಿಯನ್ನು ಬೇಟೆಯಾಗಿಸಿ, ಮಾಂಸವನ್ನು ಮನೆಯಲ್ಲೇ ತಯಾರಿಸಿ ಮಾರಾಟ ಮಾಡಲು ಸಿದ್ಧತೆ ನಡೆಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಗಾಮ ಗ್ರಾಮದ ನಿವಾಸಿ ಕುಮಾರ್ ಬಂಧಿತ ಆರೋಪಿ. ಈತನಿಂದ 27 ಕೆ.ಜಿ. ಕಾಡು ಹಂದಿ ಮಾಂಸ ಮತ್ತು ಕೃತ್ಯಕ್ಕೆ ಬಳಸಲಾಗುತ್ತಿದ್ದ ಕತ್ತಿ, ಮಚ್ಚು, ತಕ್ಕಡಿ ಸೇರಿದಂತೆ ಹಲವು ವಸ್ತುಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಶಿಕಾರಿಪುರ ಉಪವಿಭಾಗದ ಅಂಬ್ಲಿಗೊಳ ವಲಯದ ಅರಣ್ಯಾಧಿಕಾರಿ ಶಾಂತಪ್ಪ ಪೂಜಾರ್ ನೇತೃತ್ವದಲ್ಲಿ, ಉಪ ವಲಯದ ಅರಣ್ಯಾಧಿಕಾರಿಗಳಾದ ಅಬ್ದುಲ್ ಕರೀಮ್ ಮತ್ತು ಅಮಿತ್, ಜೊತೆಗೆ ಗಸ್ತು ಅರಣ್ಯ ಪಾಲಕರಾದ ಕೃಷ್ಣಮೂರ್ತಿ, ಸುರೇಶ್, ಚಂದ್ರಪ್ಪ ಲಮಾಣಿ ಸೇರಿದಂತೆ ಅಧಿಕಾರಿಗಳ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈ ಘಟನೆ ಸಂಬಂಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





