ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆ ಆರಂಭ; ಕಲಗೋಡು ರತ್ನಾಕರ್

Written by Mahesha Hindlemane

Published on:

ಹೊಸನಗರ : ರಾಜ್ಯಾದ್ಯಂತ ನಡೆಯುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮಂಗಳವಾರದಿಂದ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೋಡೂರು ಗ್ರಾಪಂ ವ್ಯಾಪ್ತಿಯ ಯಳಗಲ್ಲು ಮತಗಟ್ಟೆಯಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸ್ಥಳೀಯ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯ ಮಹತ್ವ ಮತ್ತು ವಿಧಾನಗಳ ಕುರಿತು ವಿವರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ಅರ್ಹ ಮತದಾರರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಸರಿಯಾಗಿ ಇದ್ದುದನ್ನು ಪರಿಶೀಲಿಸಿಕೊಳ್ಳುವ ಅಗತ್ಯವಿದೆ ಎಂದು ಅವರು ಹೇಳಿದರು. ಜೊತೆಗೆ, ತಪ್ಪಿದ್ದರೆ ಹೊಸ ನೋಂದಣಿ ಅಥವಾ ತಿದ್ದುಪಡಿ ಮಾಡಿಸಿಕೊಳ್ಳುವ ಪ್ರಕ್ರಿಯೆಯ ಬಗ್ಗೆ ಸಹ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ. ಚಂದ್ರಮೌಳಿ, ತಹಸೀಲ್ದಾರ್ ಭರತ್ ರಾಜ್, ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಯಳಗಲ್ಲು ಮತಗಟ್ಟೆಯ ಪ್ರಮುಖರು ಸಹ ಭಾಗವಹಿಸಿದ್ದರು.

Leave a Comment