ಹೊಸನಗರ : ತಾಲ್ಲೂಕಿನಾದ್ಯಂತ ಅತಿಯಾದ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹೊಸನಗರ ತಾಲ್ಲೂಕಿನಾದ್ಯಂತ ಇಂದು (ಜು.06) ಎಲ್ಲಾ ಅಂಗನವಾಡಿ ಕೇಂದ್ರಗಳು, ಶಾಲಾ ಹಾಗೂ ಪಿ.ಯು. ಕಾಲೇಜುಗಳಿಗೆ ರಜೆ ಘೋಷಿಸಿ ಹೊಸನಗರ ತಹಸೀಲ್ದಾರ್ ಭರತ್ರಾಜ್ ಆದೇಶಿಸಿದ್ದಾರೆ.

ಈ ರಜೆ ದಿನದಂದು ನಡೆಯಬೇಕಾಗಿದ್ದ, ಪಾಠ ಪ್ರವಚನಗಳನ್ನು ಮುಂದಿನ ಸಾರ್ವತ್ರಿಕ ರಜೆ ದಿನಗಳಲ್ಲಿ ನಡೆಸಿ ಹೊಂದಾಣಿಕೆ ಮಾಡಿಕೊಳ್ಳಲು ತಿಳಿಸಲಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





