ಪಾರದರ್ಶಕವಾಗಿ ಕಾಮಗಾರಿಗಳ ನಿರ್ವಹಣೆ : ಸಾಮಾಜಿಕ ಪರಿಶೋಧನ ಗ್ರಾಮ ಸಭೆಯಲ್ಲಿ ಪ್ರಶಂಸೆ

Written by Mahesha Hindlemane

Published on:

ರಿಪ್ಪನ್‌ಪೇಟೆ : ಇಲ್ಲಿನ ಗ್ರಾಮ ಪಂಚಾಯಿತ್ 2026-27ನೇ ಸಾಲಿನ ಪ್ರಥಮ ಹಂತದ ಹಾಗೂ 2025-26ನೇ ಸಾಲಿನ ಎಂ.ಜಿ.ಎನ್.ಆರ್.ಇ.ಜಿ.ಎ. ಹಾಗೂ 2025-26ನೇ ಸಾಲಿನ 15ನೇ ಹಣಕಾಸು ಯೋಜನೆಯ ಕಾಮಗಾರಿಗಳ ಸಾಮಾಜಿಕ ಪರಿಶೋಧನಾ ಗ್ರಾಮಸಭೆಯೂ ಯಾವುದೇ ಸಾರ್ವಜನಿಕರ ಆಕ್ಷೇಪಣೆಯಿಲ್ಲದೆ ಪಾರದರ್ಶಕವಾಗಿ ನಿರ್ವಹಿಸಲಾಗಿದೆ ಎಂದು ಅನುಮೋದಿಸುವ ಮೂಲಕ ಪ್ರಶಂಸೆಗೆ ಕಾರಣವಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ಪಶು ವೈದ್ಯಕೀಯ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಗಿರೀಶ್ ಇವರ ಅಧ್ಯಕ್ಷತೆಯಲ್ಲಿ ಸಭೆ ಯಶಸ್ವಿಯಾಗಿ ಯಾವುದೇ ಗಲಾಟೆ ಗೊಂದಲವಿಲ್ಲದೆ ಶಾಂತವಾಗಿ ಜರುಗಿತು.

ಸಾಮಾಜಿಕ ಲೆಕ್ಕ ಪರಿಶೋಧನ ಗ್ರಾಮ ಸಭೆಯಲ್ಲಿ ಗ್ರಾಮ ಪಂಚಾಯಿತ್ ಆಡಳಿತಾಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತ್ ಅಭಿವೃದ್ದಿ ಅಧಿಕಾರಿ ನಾಗರಾಜ್ ಹಾಗೂ ತೋಟಗಾರಿಕಾ ಇಲಾಖೆಯ ಸಹಾಯಕ ಕೃಷಿ ಆಧಿಕಾರಿ ಚಂದ್ರಶೇಖರ್ ಹಾಗೂ ಎಂ.ಜಿ.ಎನ್.ಆರ್.ಇ.ಜಿ.ಎ.ಮನ್ರೇಗಾ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪಿಡಿಒ ನಾಗರಾಜ್ ಸ್ವಾಗತಿಸಿದರು. ಲಕ್ಷ್ಮಿ ನಾಗರಾಜ್ ನಿರೂಪಿಸಿ, ವಂದಿಸಿದರು.

Leave a Comment