ತೀರ್ಥಹಳ್ಳಿ : ಕೋಣಂದೂರಿನ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಹಾಗೂ ಬೆದರಿಕೆಯ ಆರೋಪದ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ.
ಘಟನಾ ವಿವರ :
ಆಸಿಫ್ ಎಂಬ ಆರೋಪಿಯು ಸಾಮಾಜಿಕ ಜಾಲತಾಣದ ಮೂಲಕ ಸುಮಾರು ಮೂರು ತಿಂಗಳ ಹಿಂದೆ ಯುವತಿಯನ್ನು ಪರಿಚಯಿಸಿಕೊಂಡಿದ್ದಾನೆ. ಬಳಿಕ ಆಕೆಯ ಫೋಟೋವನ್ನು ಅಸಭ್ಯವಾಗಿ ಎಡಿಟ್ ಮಾಡಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ, ಅನೇಕ ಬಾರಿ ಬಲವಂತವಾಗಿ ದೈಹಿಕ ಸಂಪರ್ಕ ಸಾಧಿಸಿದ್ದಾನೆ ಎಂದು ದೂರಿನಲ್ಲಿದೆ.
ಆಸಿಫ್ ಜೊತೆಗೆ ಕೆಲಸ ಮಾಡುತ್ತಿದ್ದ ಮತ್ತೊಬ್ಬ ಆರೋಪಿ ಸಾಹಿಲ್, ಆಸಿಫ್ ಮತ್ತು ಯುವತಿಯೊಂದಿಗೆ ಇರುವ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಯುವತಿಯ ಮೇಲೆ ಅಸಭ್ಯವಾಗಿ ಕೈಹಾಕಿದ್ದಾನೆ. ಪ್ರತಿರೋಧಿಸಿದಾಗ ಇಡೀ ಗ್ರಾಮದವರಿಗೆ ವಿಷಯವನ್ನು ತಿಳಿಸುವುದಾಗಿ ಬೆದರಿಕೆ ನೀಡಿದ್ದಾನೆ.
ಮೂರನೇ ಆರೋಪಿ ಸುಹೇಲ್, ಯುವತಿಯ ಮೊಬೈಲ್ಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿ, ಕಾಲೇಜಿಗೆ ಹೋಗುವ ಮತ್ತು ಬರುವ ಸಮಯದಲ್ಲಿ ಹಿಂಬಾಲಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಯುವತಿಯ ದೂರಿನ ಆಧಾರದ ಮೇಲೆ ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆಸಿಫ್ ಮತ್ತು ಸಾಹಿಲ್ ಅವರನ್ನು ಬಂಧಿಸಿ ಶಿವಮೊಗ್ಗ ಜೈಲಿಗೆ ಕಳುಹಿಸಿದ್ದಾರೆ. ಮೂರನೇ ಆರೋಪಿಯನ್ನು ಪತ್ತೆಗೆ ಬಲೆ ಬೀಸಲಾಗಿದೆ. ತನಿಖೆಯು ಮುಂದುವರಿಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.





