ರಿಪ್ಪನ್‌ಪೇಟೆ : ರಸ್ತೆ ಅಗಲೀಕರಣ ಕಾಮಗಾರಿಯ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

Written by Mahesha Hindlemane

Published on:

ರಿಪ್ಪನ್‌ಪೇಟೆ : ನಾಲ್ಕು ಜಿಲ್ಲಾ ಸಂಪರ್ಕದ ಹೃದಯ ಭಾಗವಾಗಿರುವ ವಿನಾಯಕ ವೃತ್ತದ ರಸ್ತೆ ಅಗಲೀಕರಣ ಕಾಮಗಾರಿ ಮತ್ತು ಆಟೋ ನಿಲ್ದಾಣದ ಸಮಸ್ಯೆಯ ಕುರಿತು ಶಾಶ್ವತ ಪರಿಹಾರವನ್ನು ಕಲ್ಪಿಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಹತ್ತಿರ ಪ್ರಾಸ್ತಾಪಿಸಿದ ಮನವಿಗೆ ಸ್ಪಂದಿಸಿ ಖುದ್ದು ಶಾಸಕರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ನಾಲ್ಕು ರಸ್ತೆಯ ಅಗಲೀಕರಣ ಮತ್ತು ವಿನಾಯಕ ಸರ್ಕಲ್ ವಿಸ್ತರಣೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ನಂತರ ತೀರ್ಥಹಳ್ಳಿ ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಪಕ್ಕದಲ್ಲಿ ಪ್ಯಾಸೆಂಜರ್ ಆಟೋ ನಿಲುಗಡೆಗೆ ಸ್ಥಳ ಗುರುತಿಸಿ ತಕ್ಷಣದಿಂದಲೇ ನಿಲುಗಡೆಗೆ ಅವಕಾಶ ಮಾಡಿಕೊಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಸಂತೋಷರಿಗೆ ಶಾಸಕರು ಸೂಚಿಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ವಿನಾಯಕ ವೃತ್ತದಲ್ಲಿನ ನಾಲ್ಕು ರಸ್ತೆಯನ್ನು ಅಗಲೀಕರಣ ಮಾಡಿ ಡಾಂಬರೀಕರಣ ಕಾಮಗಾರಿ ಮಾಡಲಾಗಿದೆ. ಉಳಿದಂತೆ ಬಾಕ್ಸ್ ಚರಂಡಿ ಕಾಮಗಾರಿ ಪೂರ್ಣ ಹಂತ ತಲುಪಿದ್ದು ಅತಿ ಶೀಘ್ರದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಮುಕ್ತಗೊಳಿಸಲಾಗುವುದು ಎಂದು ಹೇಳಿ, ಮೂರು ಸೆಲ್ಟರ್ ನಿರ್ಮಾಣ ಹಾಗೂ ಸರ್ಕಲ್ ಬಳಿಯಲ್ಲಿ ಇರುವ ಆಲದ ಮರದ ಕೊಂಬೆಗಳನ್ನು ಕಟಾವು ಮಾಡಿ ಸುಂದರ ಆಕರ್ಷಕ ಪಟ್ಟಣವನ್ನಾಗಿ ಮಾಡುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ಖಡಕ್ ಸೂಚನೆ ನೀಡಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಲೋಕೋಪಯೋಗಿ ಇಲಾಖೆಯ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಆಟೋ ಚಾಲಕರು ಸಾರ್ವಜನಿಕರು ಇದ್ದರು.

Leave a Comment