ಹವಾಮಾನ ವೈಪರಿತ್ಯ ತಡೆಗಟ್ಟಲು ಪರಿಸರದ ಜಾಗೃತಿ ಮೂಡಿಸಿ ; PSI ರಾಜುರೆಡ್ಡಿ

Written by Mahesha Hindlemane

Published on:

ರಿಪ್ಪನ್‌ಪೇಟೆ : ಪರಿಸರ ಸಂರಕ್ಷಣೆ ನಮ್ಮೆಲ್ಲರ ಬದುಕಿನ ಭಾಗವಾಗಬೇಕು. ಗಿಡ-ಮರಗಳನ್ನು ಬೆಳೆಸುವ ಮೂಲಕ ಪ್ರಾಣಿ-ಪಕ್ಷಿಗಳು ಸೇರಿದಂತೆ ಸಮಸ್ತ ಭೂ ಮಂಡಲವನ್ನು ಸ್ವಚ್ಚವಾಗಿಟ್ಟುಕೊಂಡು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಗುರುತರ ಹೊಣೆಗಾರಿಕೆಯನ್ನು ಅರ್ಥ ಮಾಡಿಕೊಳ್ಳಬೇಕು. ಹವಾಮಾನ ವೈಪರಿತ್ಯ ತಡೆಗಟ್ಟಲು ಜನರಲ್ಲಿ ಪರಿಸರದ ಜಾಗೃತಿ ಮೂಡಿಸುವುದು ಇಂದಿನ ಕಾಲಮಾನದ ಅಗತ್ಯವಾಗಿದೆ ಎಂದು ರಿಪ್ಪನ್‌ಪೇಟೆ ಠಾಣೆಯ ಪಿಎಸ್‌ಐ ರಾಜುರೆಡ್ಡಿ ಕರೆ ನೀಡಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ರಿಪ್ಪನ್‌ಪೇಟೆಯ ರೋಟರಿ ಕ್ಲಬ್‌ನವರು ಆಯೋಜಿಸಲಾದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಸಕಾಲದಲ್ಲಿ ಮಳೆ ಬಾರದೆ ರೈತರು ಕಂಗಾಲಾಗಿದ್ದಾರೆ. ದುರಾಸೆಯಿಂದಾಗಿ ಅರಣ್ಯ ನಾಶ ನಿತ್ಯ ಅವ್ಯಾಹತವಾಗಿ ನಡೆಯುತ್ತಿದ್ದು ಇದರಿಂದಾಗಿ ಮಳೆ ಕಡಿಮೆಯಾಗಲು ಕಾರಣವಾಗಿದೆ. ಇನ್ನಾದರೂ ಅರಣ್ಯ ಉಳಿಸಿ ಪರಿಸರ ರಕ್ಷಣೆ ಮಾಡಬೇಕಾಗಿದೆ ಎಂದರು.

ರೋಟರಿ ಕ್ಲಬ್ ಆಧ್ಯಕ್ಷ ರವೀಂದ್ರ ಬಲ್ಲಾಳ್, ರೋಟರಿ ಕ್ಲಬ್ ಸಂಸ್ಥಾಪಕ ಅಧ್ಯಕ್ಷ ಎಂ.ಬಿ.ಲಕ್ಷ್ಮಣ ಗೌಡ, ಜೆ.ರಾಧಾಕೃಷ್ಣ, ರಮೇಶ ಎಸ್.ಹೆಬ್ಬಾರ್ (ರಾಮು ಹೆಬ್ಬಾರ್), ಹೆಚ್.ಎಂ.ವರ್ತೇಶಗೌಡ ಹುಗುಡಿ, ಗಣೇಶ ಎನ್.ಕಾಮತ್, ಎಂ.ಬಿ.ಮಂಜುನಾಥ, ತಾನಾರಾಮ, ನಿವೃತ್ತ ಮುಖ್ಯೋಪಾಧ್ಯಾಯ ರಾಧಾಕೃಷ್ಣ, ಹೆಚ್.ಎಸ್.ಸುಧೀಂದ್ರ ಹೆಬ್ಬಾರ್, ಸಂತೋಷ, ದೇವದಾಸ ಆಚಾರ್, ಸದಾನಂದ, ಸುಖೇಶ್, ಇನ್ನಿತರರು ಹಾಜರಿದ್ದರು.

Leave a Comment