ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ !

Written by Mahesha Hindlemane

Published on:

ತೀರ್ಥಹಳ್ಳಿ : ಇಲ್ಲಿನ ಸೀಬಿನಕೆರೆ ನಿವಾಸಿ ಮತ್ತು ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (29) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ದಸರಾ ಹಬ್ಬದ ಸಂದರ್ಭದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುತ್ತಿದ್ದ ರಾಕೇಶ್, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಮೂರ್ನಾಲ್ಕು ವರ್ಷಗಳಿಂದ ದಸರಾ ಕಾರ್ಯಕ್ರಮದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುವ ಮೂಲಕ ಜನಮನ ಗೆದ್ದಿದ್ದ ರಾಕೇಶ್, ಈ ಘಟನೆಯಿಂದ ತೀರ್ಥಹಳ್ಳಿ ಪಟ್ಟಣದಲ್ಲಿ ನೀರವ ಮೌನ ಆವರಿಸಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment