ಶಿವಮೊಗ್ಗ: ಮೀನುಗಾರಿಕೆ ಇಲಾಖೆಯು 2026–27ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಮೀನುಮರಿ ಖರೀದಿಗೆ ಸಹಾಯಧನ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ವಂತ ಕೊಳ ಹೊಂದಿರುವವರು, ಇಲಾಖೆಯಿಂದ ಗುತ್ತಿಗೆ ಪಡೆದಿರುವವರು ಅಥವಾ ಹರಾಜಿನ ಮೂಲಕ ಪಡೆದ ಕೆರೆಗಳಲ್ಲಿ ವೈಜ್ಞಾನಿಕವಾಗಿ ಮೀನುಮರಿ ಬಿತ್ತನೆ ಮಾಡುವವರು ಈ ಯೋಜನೆಯಡಿ ಸಹಾಯಧನ ಪಡೆಯಬಹುದು.
ಸ್ವಂತ ಕೊಳ ನಿರ್ಮಿಸಿಕೊಂಡು ಮೀನುಮರಿ ಪಾಲನೆಗಾಗಿ ಮರಿಗಳನ್ನು ಖರೀದಿಸಿರುವ ಫಲಾನುಭವಿಗಳೂ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಮೀನುಗಾರಿಕೆ ಇಲಾಖೆ ತಿಳಿಸಿದೆ.
ಅರ್ಹರು ಜಿಲ್ಲಾ ಪಂಚಾಯತ್ ಯೋಜನೆಗಳ ಅಧಿಕೃತ ಪೋರ್ಟಲ್ shimoga.nic.in ಮೂಲಕ ಸೆಪ್ಟೆಂಬರ್ 15ರೊಳಗೆ ಆನ್ಲೈನ್ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ ಹಾಗೂ ಅಗತ್ಯ ದಾಖಲೆಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು.
ತಾಲ್ಲೂಕುವಾರು ಸಂಪರ್ಕ ಸಂಖ್ಯೆಗಳು
ಶಿವಮೊಗ್ಗ: 9986040981
ಭದ್ರಾವತಿ: 9743370815
ಶಿಕಾರಿಪುರ: 9686939028
ಸಾಗರ: 9538044365
ಸೊರಬ: 9535386449
ತೀರ್ಥಹಳ್ಳಿ: 8655132438
ಅರ್ಹ ಫಲಾನುಭವಿಗಳು ಕೊನೆಯ ದಿನಾಂಕದವರೆಗೆ ಕಾಯದೆ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ಅರ್ಜಿ ಸಲ್ಲಿಸುವಂತೆ ಮೀನುಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.