ಶಿವಮೊಗ್ಗ

ಜುಲೈ 31ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ, ಜುಲೈ 29: ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಿನ್ನೆಲೆಯಲ್ಲಿ ಜುಲೈ 31ರಂದು ಶಿವಮೊಗ್ಗ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ ಎಂದು ಮೆಸ್ಕಾಂ ತಿಳಿಸಿದೆ.

ಶಿವಮೊಗ್ಗ ನಗರ ಉಪವಿಭಾಗ–1ರ ಘಟಕ–2 ವ್ಯಾಪ್ತಿಯಲ್ಲಿ ಕಾಮಗಾರಿ ನಡೆಯಲಿದ್ದು, ಅಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಸೋಮಯ್ಯ ಲೇಔಟ್, ಟ್ಯಾಂಕ್ ಬಂಡ್ ರಸ್ತೆ, ಜೋಸೆಫ್ ನಗರ, ಬಾಪೂಜಿನಗರ, ಶಂಕರಮಠದ ಎಡಭಾಗದ ರಸ್ತೆ, ಟಿಜಿಎನ್ ಲೇಔಟ್, ಮೀನಾಕ್ಷಿ ಭವನ, ಬಿ.ಎಚ್. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಇರುವುದಿಲ್ಲ.

ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಮನವಿ ಮಾಡಿದೆ.

Leave a Comment