ತೀರ್ಥಹಳ್ಳಿ

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರ ಪ್ರದೇಶದಲ್ಲಿ ಭಾರಿ ಮಳೆಯ ಪರಿಣಾಮ ಗುಡ್ಡ ಕುಸಿದು ಬಿದ್ದಿದ್ದು, ಮನೆ ಮಣ್ಣಿನಡಿ ಸಿಲುಕಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡು, ಭಾನುವಾರ ಹಠಾತ್ತನೆ ಮಣ್ಣು ಮತ್ತು ಬಂಡೆಗಳು ಕೆಳಭಾಗದಲ್ಲಿದ್ದ ಮನೆಯ ಮೇಲೆ ಕುಸಿದು ಬಿದ್ದಿವೆ ಎನ್ನಲಾಗಿದೆ. ಘಟನೆಯಲ್ಲಿ ಮನೆ ಸಂಪೂರ್ಣವಾಗಿ ಮಣ್ಣಿನಡಿ ಸಿಲುಕಿಕೊಂಡಿದೆ.

guudaa

ಪ್ರಾಥಮಿಕ ಮಾಹಿತಿಯ ಪ್ರಕಾರ ಮೃತಪಟ್ಟವರನ್ನು ಮಲ್ಲಿಕಾರ್ಜುನ್ (35), ನಾಗವೇಣಿ (28) ಮತ್ತು ಸಂತೋಷ್ (3) ಎಂದು ಗುರುತಿಸಲಾಗಿದೆ. ಮೂವರು ಗುಡ್ಡದ ಸಮೀಪ ನಿರ್ಮಿಸಿದ್ದ ಶೆಡ್‌ನಲ್ಲಿ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.

ಮೃತರು ಮೂಲತಃ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳು ಎನ್ನಲಾಗಿದೆ.

ಘಟನೆ ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳೀಯ ಆಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Comment