ಹೊಸನಗರ

ಆ.11ಕ್ಕೆ ಕೆಂಚನಾಲ ಮಾರಿಕಾಂಬಾ ದೇವಿ ಜಾತ್ರೆ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ಆಗಸ್ಟ್ 11ರ ಮಂಗಳವಾರ ಬೆಳಗ್ಗೆಯಿಂದ ಸಂಜೆಯವರೆಗೆ ನಡೆಯಲಿದೆ ಎಂದು ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರ್ಷದಲ್ಲಿ ಎರಡು ಭಾರಿ ಆಚರಿಸಲಾಗುವ ಈ ಜಾತ್ರೆಯು ಮಳೆಗಾಲದಲ್ಲಿ ಮಂಗಳವಾರ, ಬೇಸಿಗೆಯಲ್ಲಿ ಬುಧವಾರ ದಿನದಂದು ನಡೆಯುವುದು ವಿಶೇಷ. ಆಗಸ್ಟ್ 11 ರಂದು  ಬೆಳಗ್ಗೆ 6 ಗಂಟೆಯಿಂದ ದೇವಿಗೆ ವಿಶೇಷ ಅಲಂಕಾರ ಪೂಜೆ ಮಹಾಮಂಗಳಾರತಿ ನಡೆಯಲಿದೆ.

ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸಿ ದೇವಿಯ ದರ್ಶನಾಶೀರ್ವಾದ ಪಡೆದುಕೊಳ್ಳುವಂತೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಸಮಿತಿಯವರು, ದೇವಸ್ಥಾನ ಸೇವಾ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment