ಶಿವಮೊಗ್ಗ ಸುದ್ದಿ ಶಿವಮೊಗ್ಗ

ಹೋಂಸ್ಟೇ, ಹೋಟೆಲ್ ಹಾಗೂ ರೆಸಾರ್ಟ್‌ಗಳಲ್ಲಿ ಮಾಹಿತಿ ಫಲಕ ಕಡ್ಡಾಯ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೆಲ್, ರೆಸಾರ್ಟ್ ಹಾಗೂ ಇತರೆ ವಸತಿ ಘಟಕಗಳು ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಸೂಚಿಸಿದ್ದಾರೆ.

ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ತುರ್ತು ಸಂದರ್ಭಗಳಲ್ಲಿ ಅಗತ್ಯ ನೆರವು ತ್ವರಿತವಾಗಿ ದೊರೆಯುವಂತೆ ಮಾಡಲು ಎಲ್ಲಾ ವಸತಿ ಘಟಕಗಳಲ್ಲಿ ಮಾಹಿತಿ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಅವರು ಆದೇಶಿಸಿದ್ದಾರೆ.

ವಸತಿ ಘಟಕಗಳಲ್ಲಿ ಸಿಂಗಲ್ ಎಮರ್ಜೆನ್ಸಿ ಹೆಲ್ಪ್‌ಲೈನ್ 112, ನ್ಯಾಷನಲ್ ಟೂರಿಸ್ಟ್ ಹೆಲ್ಪ್‌ಲೈನ್ 1800-11-1363/1363, ಮಹಿಳಾ ಸುರಕ್ಷತಾ ಸಹಾಯವಾಣಿ 181, ಮಕ್ಕಳ ಸಹಾಯವಾಣಿ 1098 ಸೇರಿದಂತೆ ತುರ್ತು ಸಂಪರ್ಕ ಸಂಖ್ಯೆಗಳು ಸ್ಪಷ್ಟವಾಗಿ ಕಾಣುವಂತೆ ಪ್ರದರ್ಶಿಸಬೇಕು.

ಇದೇ ವೇಳೆ ಸಮೀಪದ ಆಸ್ಪತ್ರೆ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಂಪರ್ಕ ಮಾಹಿತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ/ಉಪನಿರ್ದೇಶಕರ ಕಚೇರಿ ಸಂಖ್ಯೆ 08182-251444, ಜಿಲ್ಲಾಧಿಕಾರಿಗಳ ಕಚೇರಿ ಸಂಖ್ಯೆ 08182-271101, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಂಖ್ಯೆ 08182-221010/1077, ಗ್ರಾಮ ಪಂಚಾಯಿತಿ ಅಥವಾ ನಗರ ಸ್ಥಳೀಯ ಸಂಸ್ಥೆಯ ಸಂಪರ್ಕ ಮಾಹಿತಿ ಹಾಗೂ ಸಖಿ ಒನ್ ಸ್ಟಾಪ್ ಸೆಂಟರ್ ಸಂಖ್ಯೆ 08182-223055 ಅನ್ನು ಕೂಡ ಮಾಹಿತಿ ಫಲಕದಲ್ಲಿ ಅಳವಡಿಸಬೇಕು ಎಂದು ತಿಳಿಸಲಾಗಿದೆ.

ಈ ಮಾಹಿತಿ ಫಲಕಗಳು ಪ್ರವಾಸಿಗರಿಗೆ ಸುಲಭವಾಗಿ ಕಾಣುವ ಸ್ಥಳಗಳಲ್ಲಿ ಇರಬೇಕು. ತುರ್ತು ಸಂದರ್ಭಗಳಲ್ಲಿ ಪ್ರವಾಸಿಗರು, ಮಹಿಳೆಯರು, ಮಕ್ಕಳು ಹಾಗೂ ಸಾರ್ವಜನಿಕರಿಗೆ ನೆರವು ದೊರೆಯುವಂತೆ ಎಲ್ಲ ವಸತಿ ಘಟಕಗಳ ಮಾಲೀಕರು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ‘ಎ’ ಬ್ಲಾಕ್, 3ನೇ ತಿರುವು, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಅಥವಾ ದೂರವಾಣಿ ಸಂಖ್ಯೆ 08182-251444 ಅನ್ನು ಸಂಪರ್ಕಿಸಬಹುದು.

Leave a Comment