ಕಾರ ಹುಣ್ಣಿಮೆ ಪ್ರಯುಕ್ತ ಚಂದ್ರಗುತ್ತಿಗೆ ಹರಿದು ಬಂತು ಭಕ್ತ ಸಾಗರ

Written by malnadtimes.com

Published on:

SORABA | ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶಿವಮೊಗ್ಗ (Shivamogga) ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿರುವ ಚಂದ್ರಗುತ್ತಿ (Chandragutti) ಶ್ರೀ ರೇಣುಕಾಂಬ ದೇವಸ್ಥಾನಕ್ಕೆ ಕಾರ ಹುಣ್ಣಿಮೆ ಪ್ರಯುಕ್ತ ಸಾವಿರಾರು ಭಕ್ತರು ಶುಕ್ರವಾರ ಆಗಮಿಸಿ ಶ್ರದ್ಧಾಭಕ್ತಿಯಿಂದ ವಿಶೇಷ ಪೂಜೆ ಸಲ್ಲಿಸಿದರು.

WhatsApp Group Join Now
Telegram Group Join Now
Instagram Group Join Now

Read More:ರಸ್ತೆ ಪಕ್ಕದಲ್ಲೇ ಪ್ರಸವ, ನವಜಾತ ಶಿಶುವನ್ನು ಅಲ್ಲೇ ಬಿಟ್ಟು ಹೋದ ಮಹಾತಾಯಿ !

ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಬಾಗಲಕೋಟೆ, ಚಿತ್ರದುರ್ಗ, ರಾಯಚೂರು, ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಮಳೆಯ ನಡುವೆಯೂ ಆಗಮಿಸಿ ಮಲೆನಾಡಿನ ಆರಾಧ್ಯ ದೇವಿ ರೇಣುಕಾದೇವಿಯನ್ನು ದರ್ಶನ ಪಡೆದು ಉದೋ ಉದೋ ಎಂದು ಜೈಕಾರ ಹಾಕಿ ಭಕ್ತಿ ಸಮರ್ಪಿಸಿದರು.

ಪರಿವಾರ ದೇವರುಗಳಾದ ನಾಗದೇವತೆ, ಮಾತಂಗಿ, ಕಾಲಭೈರವ, ಪರಶುರಾಮ ತ್ರಿಶೂಲದ ಭೈರಪ್ಪ ದೇವರಿಗೆ ಹಾಗೂ ತೊಟ್ಟಿಲು ಬಾವಿಗೆ ಹುಣ್ಣಿಮೆಯ ವಿಶೇಷ ಪೂಜೆ ಸಲ್ಲಿಸಲಾಯಿತು.

ದೇವರ ಹೆಸರಿನಲ್ಲಿ ಭಕ್ತರು ಧಾರ್ಮಿಕ ಪೂಜಾ ವಿಧಿ ವಿಧಾನಗಳಾದ ಪಡ್ಲಿಗೆ ತುಂಬಿಸುವುದು, ಮುಡಿ ನೀಡುವುದು, ಕಿವಿ ಚುಚ್ಚಿಸುವುದು, ವಿವಿಧ ಸೇವೆ ಮುಂತಾದವುಗಳನ್ನು ಆಚರಿಸಿದರು.

ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ಚಂದ್ರಗುತ್ತಿ ಮುಖ್ಯ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆಯಿಂದ ಸಂಚಾರ ಅಸ್ತವ್ಯಸ್ತಗೊಂಡಿತು.

Read More:ರೈತರಿಗೆ ಸಿಹಿಸುದ್ದಿ, 14 ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದ ಕೇಂದ್ರ ಸರ್ಕಾರ

Leave a Comment