Karnataka Rain | ರಾಜ್ಯದಲ್ಲಿ ಆರಿದ್ರಾ ಮಳೆ ಅಬ್ಬರ ಜೋರಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ 20 ಸೆಂ.ಮೀ.ಗೂ ಅಧಿಕ ಮಳೆಯಾಗುವ ಸಂಭವವಿದ್ದು ಹವಾಮಾನ ಇಲಾಖೆಯಿಂದ (IMD) ರೆಡ್ ಅಲರ್ಟ್ ನೀಡಲಾಗಿದೆ.
ಚಿಕ್ಕಮಗಳೂರು (Chikkamagaluru), ಕೊಡಗು (Kodagu), ಶಿವಮೊಗ್ಗ (Shivamogga) ಜಿಲ್ಲೆಗಳಲ್ಲಿ 15ರಿಂದ 20 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆಯಿದ್ದು ಆರೆಂಜ್ ಅಲರ್ಟ್ ನೀಡಲಾಗಿದೆ.
ಹಾಸನ, ಮೈಸೂರು, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ 10 ರಿಂದ 15 ಸೆಂ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 28ರಂದು ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದ್ದು, ಹಾವೇರಿ, ಹಾಸನ, ಧಾರವಾಡ, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Read More :ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಭಾರಿ ವರ್ಷಧಾರೆ, ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ?