Gruha lakshmi : ಕರ್ನಾಟಕ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಗೃಹಲಕ್ಷ್ಮಿ ಹಣ ಇಲ್ಲಿಯವರೆಗೂ ಬರದೆ ಇದ್ದವರಿಗೆ ರಾಜ್ಯ ಸರ್ಕಾರದಿಂದ ಈಗಾಗಲೇ ಎರಡು ತಿಂಗಳ ಹಣ ಸ್ಥಗಿತಗೊಂಡಿದ್ದು, ಮಹಿಳೆಯರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಇನ್ನು ಕೂಡ ಹನ್ನೊಂದನೇ ಕಂತಿನ ಹಣ ಬಿಡುಗಡೆ ಆಗಿಲ್ಲ.ಆದರೆ ಇವತ್ತು ಎಲ್ಲ ಮಹಿಳಾ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆ ಆಗ್ತಾ ಇದೆ. ಈಗಾಗಲೇ ಸರ್ಕಾರದ ಖಜಾನೆಯಿಂದ ಹಣ ಬಿಡುಗಡೆ ಆಗಿದ್ದು, ಇನ್ನೇನು ಫಲಾನುಭವಿಗಳ ಮಹಿಳೆಯರ ಖಾತೆಗಳಿಗೆ ವರ್ಗಾವಣೆ ಆಗುವುದು ಮಾತ್ರ ಬಾಕಿ ಉಳಿದಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಎಲ್ಲ ಮಹಿಳಾ ಫಲಾನುಭವಿಗಳು ಇಂದು ಸಾಯಂಕಾಲ ತಮ್ಮ ಬ್ಯಾಂಕ್ ಖಾತೆಗಳನ್ನ ಪರಿಶೀಲಿಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ.
ಹಣ ಇನ್ನೂ ಕೂಡ ಬಂದಿಲ್ಲ ಅಂದ್ರೆ ಈ ಕೆಲಸ ಮಾಡಲು ಕೂಡ ತಿಳಿಸಿದ್ದು,ಈಗಾಗಲೇ ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಹಾಕಿದ್ದೇವೆ. ಗೃಹಲಕ್ಷ್ಮಿ ಹಣವನ್ನ ಮೇ 1 ಕೊಟ್ಟಿದ್ದೆವು. ಜೂನ್ ತಿಂಗಳ ಹಣ ಈಗಾಗಲೇ ಹಾಕಿದ್ದೆವೆ.ಇಡೀ ರಾಜ್ಯದಲ್ಲಿ ಇವತ್ತು ಮತ್ತು ನಾಳೆ ಕ್ರೆಡಿಟ್ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಎರಡು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರುತ್ತಿಲ್ಲ ಎಂಬ ಮಹಿಳೆಯರು ಸರ್ಕಾರದ ವಿರುದ್ಧ ಕಿಡಿಕಾರಿದ್ದು, ಇದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ.ಇನ್ನೆರಡು ದಿನಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರ ಖಾತೆಗಳಿಗೆ ಹಣ ಜಮಾ ಆಗಲಿದೆ. ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯವರಿಗೆ ಮಾಡೋಕೆ ಕೆಲಸ ಇಲ್ಲ ಎಂದಿದ್ದಾರೆ.
Read More
ಹಿರಿಯ ಪತ್ರಕರ್ತ, ಸಹಕಾರಿ ಧುರೀಣ ಎಸ್.ಜಿ.ರಂಗನಾಥ ಇನ್ನಿಲ್ಲ !
ಭದ್ರಾವತಿ ಕಾರ್ಖಾನೆ ಭವಿಷ್ಯದ ಬಗ್ಗೆ ಶೀಘ್ರ ನಿರ್ಧಾರ ; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ