SHIVAMOGGA | ಮಾರುತಿ ಓಮ್ನಿ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಹಿಟ್ಟೂರಿನ ಬಳಿ ಸಂಭವಿಸಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಕೊಡತಾಳು ಗ್ರಾಮದ ಜಗದೀಶ್ (30) ಮೃತ ದುರ್ಧೈವಿ. ಈತ ಹಾರನಹಳ್ಳಿಯ ಬ್ಯಾಂಕ್ಗೆ ಹೋಗಿ ಬರುವುದಾಗಿ ತನ್ನ ಕೆಎ17ಹೆಚ್ಇ8581 ನಂಬರಿನ ಬೈಕಿನಲ್ಲಿ ಹೊರಟಿದ್ದು ಸವಳಂಗ ರಸ್ತೆಯಿಂದ ಹಾರನಹಳ್ಳಿ ಗ್ರಾಮದ ಕಡೆ ಬರುತ್ತಿದ್ದ ವೇಳೆ ಎದುರಿನಿಂದ ಬಂದ ಕೆಎ19ಎಂಎಫ್2851 ನಂಬರಿನ ಓಮ್ನಿ ವಾಹನ ಡಿಕ್ಕಿ ಹೊಡೆದಿದ್ದು ಜಗದೀಶ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More
HOSANAGARA | ಕಂದಕಕ್ಕೆ ಬಿದ್ದ ಸರ್ಕಾರಿ ಬಸ್, ಪ್ರಯಾಣಿಕರಿಗೆ ಗಾಯ !
Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ
ಸಾವಿನಲ್ಲೂ ಸಾರ್ಥಕತೆ ಮೆರೆದ ಪತ್ರಕರ್ತ ಎಸ್.ಜಿ.ರಂಗನಾಥ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.