Bangalore ಶಿವಮೊಗ್ಗ

Karnataka Rain | ಇಂದು ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

Karnataka Rain ಬೆಂಗಳೂರು : ರಾಜ್ಯದಲ್ಲಿ ಮಳೆ ಮುಂದುವರೆದಿದ್ದು ಕರಾವಳಿ (Karavali) ಮತ್ತು ಮಲೆನಾಡು (Malenadu) ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇಂದು ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi), ಧಾರವಾಡ (Daravada), ಹಾವೇರಿ (Haveri), ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru), ಚಿತ್ರದುರ್ಗ (Chithradurga), ಮೈಸೂರು (Mysore), ತುಮಕೂರು (Thumakuru), ಕೊಡುಗು (Kodagu) ಜಿಲ್ಲೆಗಳ ಧಾರಾಕಾರ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ಸೂಚನೆ ನೀಡಿದೆ.

Karnataka Rain
Karnataka Rain /Source Google

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ (Cyclone’s) ಹಿನ್ನೆಲೆಯಲ್ಲಿ ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಇನ್ನೂ ಇಂದು ಬೆಳಗಿನಜಾವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿದಿದ್ದು ಮೋಡ ಕವಿದ ವಾತಾವರಣ ಉಂಟಾಗಿದೆ.

Read More

Adike Price :ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Leave a Comment