HOSANAGARA | ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಎಂಬಲ್ಲಿ ನಡೆದಿದೆ.
ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆ. ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜಮೀನಿನ ಬಳಿ ಸಂಕ ದಾಟಲು ಹೋದಾಗ ಈ ಘಟನೆ ನಡೆದಿದೆ.
ಹೇಗಾಯ್ತು ಘಟನೆ ?
ಮೃತ ಮಹಿಳೆ ಶಶಿಕಲಾ ಬೆಳಿಗ್ಗೆ ಅಗೆ ಹಾಕಲು (ಸಸಿಮಡಿ) ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸ್ ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿ.ಮೀ. ದೂರದ ದುಮುಕದಗದ್ದೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ.
ಈ ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More
HOSANAGARA | ಹಿಡ್ಲುಮನೆ ಜಲಪಾತ ಪ್ರವೇಶ ನಿರ್ಬಂಧ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.