Karnataka Rain | ಕಳೆದೊಂದು ವಾರದಿಂದ ರಾಜ್ಯದ ಹಲವೆಡೆ ಭಾರಿ ಮಳೆ (Heavy Rain) ಸುರಿಯುತ್ತಿದ್ದು, ಇನ್ನೂ ಐದು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ.
ಕರಾವಳಿ (Karavali) ಜಿಲ್ಲೆಗಳು ಹಾಗೂ ಮಲೆನಾಡಿನ ಶಿವಮೊಗ್ಗ (Shivamogga), ಚಿಕ್ಕಮಗಳೂರು (Chikkamagaluru), ಕೊಡಗು (Kodagu) ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಜುಲೈ 9ರವರೆಗೂ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
Read More
HOSANAGARA | ಹಿಡ್ಲುಮನೆ ಜಲಪಾತ ಪ್ರವೇಶ ನಿರ್ಬಂಧ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.